ವಿಜಯಪುರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಭುಗಿಲೆದ್ದಿದ್ದು, ಇದೀಗ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಶ್ರೀ ಸಂಗಮೇಶ್ವರ ಕಾಲೇಜಿಗೆ 1 ದಿನ ರಜೆ ಘೋಷಿಸಲಾಗಿದೆ.
ಹೌದು, ಹಿಜಾಬ್ ನಲ್ಲಿ ಬಂದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು ಹಾಕಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ್ದರಿಂದ ಉಡುಪಿಯ ಎಂಜಿಎಂ ಕಾಲೇಜಿನ ಹೊರಗಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಶ್ರೀ ಸಂಗಮೇಶ್ವರ ಕಾಲೇಜಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ.
ಇನ್ನು, ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಲಾಗಿದ್ದು, ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ