ರಾಜ್ಯದಲ್ಲಿ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ, ಸುಪ್ರೀಂಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ, ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠ ಈ ಅರ್ಜಿಗಳ ವಿಚಾರಣೆ ಆರಂಭಿಸಲಿದೆ.
ಇದೇ ವರ್ಷದ ಫೆಬ್ರವರಿಯಲ್ಲಿ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಶುರುವಾಗಿತ್ತು. ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.
ರಾಜ್ಯದ ಪಿಯು ಕಾಲೇಜುಗಳಲ್ಲಿ ಹಿಜಾಬ್‌ಗೆ ನಿಷೇಧ ಹೇರುವ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ಪ್ರಶ್ನಿಸಿ, 24 ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆಲ್ ಇಂಡಿಯಾ ಡೆಮಾಕ್ರಟಿಕ್ ವಿಮೆನ್ಸ್ ಅಸೋಸಿಯೇಷನ್, ಮುಸ್ಲಿಂ ಗರ್ಲ್ಸ್ ಆ್ಯಂಡ್ ವಿಮೆನ್ಸ್ ಮೂವ್ ಮೆಂಟ್ ಸೇರಿದಂತೆ ಹಲವು ಸಂಘಟನೆಗಳು ಅರ್ಜಿ ಸಲ್ಲಿಸಿವೆ.