ಹಿಜಾಬ್ – ಐತಿಹಾಸಿಕ ತೀರ್ಪು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ

ರಾಜ್ಯದಲ್ಲಿ ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದ್ದು, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಹೇಳಿದೆ.…

ರಾಜ್ಯದಲ್ಲಿ ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದ್ದು, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ತ್ರಿ ಸದಸ್ಯ ಪೀಠವು ಈ ತೀರ್ಪನ್ನು ಪ್ರಕಟಿಸಿದೆ. ಇನ್ನು, ನ್ಯಾಯಾಲಯದ ಈ ತೀರ್ಪಿನಿಂದ ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ನಡೆಯುತ್ತಿದ್ದ ಸಮವಸ್ತ್ರ ಸಂಘರ್ಷಕ್ಕೆ ತೆರೆಬಿದ್ದಿದೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ:

Vijayaprabha Mobile App free

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ’ ಎಂದು ಮಹತ್ವದ ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ಪೂರ್ಣ ಪೀಠವು, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.

ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರ ನಿಗದಿಪಡಿಸುವ ಅಧಿಕಾರವಿದೆ ಎಂದು ತೀರ್ಪು ನೀಡಿರುವ ಹೈಕೋರ್ಟ್, ‘ಈ ಮೂಲಕ ಹಿಜಾಬ್ ಗೆ ಕೋರಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.