ಇಂದು ಹಿಜಾಬ್ ತೀರ್ಪು ಪ್ರಕಟ; ರಾಜ್ಯದಾದ್ಯಂತ ಹೈ ಅಲರ್ಟ್‌

ಕರ್ನಾಟಕದ ಹಿಜಾಬ್ ವಿವಾದ ಕುರಿತು ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಬಹುದೇ ಅಥವಾ ಧರಿಸಬಾರದೇ ಅನ್ನುವ ಮಹತ್ವದ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ಬೆಳಗ್ಗೆ 10:30ಕ್ಕೆ ತೀರ್ಪು ನೀಡುವ ಸಾಧ್ಯತೆ ಇದೆ. ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತಾ ಮತ್ತು ಸುಧಾಂಶು…

Hijab vijayaprabha news

ಕರ್ನಾಟಕದ ಹಿಜಾಬ್ ವಿವಾದ ಕುರಿತು ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಬಹುದೇ ಅಥವಾ ಧರಿಸಬಾರದೇ ಅನ್ನುವ ಮಹತ್ವದ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ಬೆಳಗ್ಗೆ 10:30ಕ್ಕೆ ತೀರ್ಪು ನೀಡುವ ಸಾಧ್ಯತೆ ಇದೆ.

ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರ ಪೀಠವೂ ಈ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಇಂದು ತೀರ್ಪು ಬರಬಹುದೆಂಬ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಹೈ ಅಲರ್ಟ್‌ಗೆ ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ನ್ಯಾಯಪೀಠವು ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.