ದಕ್ಷಿಣ ಕನ್ನಡ: ಪುಷ್ಪಗಿರಿ ವನ್ಯಧಾಮದ ತಪ್ಪಲಿನಲ್ಲಿ ಮೇಘಸ್ಪೋಟದಿಂದ ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರಿ ಹಾನಿಯಾಗಿದ್ದು ಹಾಗು ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮತ್ತು ಸುಳ್ಯ ತಾಲೂಕುಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೌದು, ಮೇಘಸ್ಪೋಟದಿಂದಾಗಿ ಪುಷ್ಪಗಿರಿ ತಪ್ಪಲಿನ ಹರಿಹರ, ಬಾಳುಗೋಡು, ಕಲ್ಮಕಾರು ಗ್ರಾಮದಲ್ಲಿ ಅಪಾರ ಹಾನಿ ಸಂಭವಿಸಿದ್ದು, ಕಡಬ ಸುಳ್ಯ ತಾಲೂಕಿನ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಇನ್ನು, ರಾಜಧಾನಿ ಬೆಂಗಳೂರು, ಹಾಸನ, ಕೊಡಗು, ಚಾಮರಾಜನಗರ, ರಾಮನಗರ ಹಾಗೂ ಮಂಡ್ಯ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ವಿಪರೀತ ಮಳೆ ಸುರಿಯುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆ ಇದೆ.