Holiday for schools : ಗಾಂಧಿ ಭಾರತ ಸಮಾವೇಶ ಇಂದು ಬೆಳಗಾವಿಯಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹೌದು, ಮಕ್ಕಳ ಸುರಕ್ಷಾ ದೃಷ್ಟಿಯಿಂದ ಇಂದು ಬೆಳಗಾವಿ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಇನ್ನು, ಶಾಲಾ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಈ ರಜೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: PM Vishwakarma Yojana | ಪಿಎಂ ವಿಶ್ವಕರ್ಮ ಯೋಜನೆಯಡಿ 3 ಲಕ್ಷ ಸಹಾಯಧನ, ಅರ್ಜಿ ಸಲ್ಲಿಕೆ ಹೇಗೆ?