ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಲ್ಲೊಂದಾದ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ’ಯಡಿ ರೈತರಿಗೆ ವಾರ್ಷಿಕ 6,000 ರೂ ಸಹಾಯಧನ ನೀಡಲಾಗುತ್ತಿದೆ. ಈ ಮೊತ್ತವನ್ನು 8,000 ರೂ.ಗೆ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.
ಹೌದು, ಸಂಸತ್ ನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಇದಕ್ಕೆ ಉತ್ತರ ನೀಡಿದ್ದು,, ‘ಪಿಎಂ ಕಿಸಾನ್ ಯೋಜನೆ ಹಣ ಹೆಚ್ಚಳ ಮಾಡುವ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ.
ಪ್ರಸ್ತುತ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ’ಯಡಿ ರೈತರಿಗೆ 2000 ರೂಗಳಂತೆ ಮೂರೂ ಕಂತುಗಳಲ್ಲಿ ವರ್ಷಕ್ಕೆ 6,000 ರೂ ಸಹಾಯಧನ ನೀಡಲಾಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




