Krishi Bhagya Yojana | ರೈತರಿಗೆ ವರದಾನವಾದ ಕೃಷಿ ಭಾಗ್ಯ ಯೋಜನೆ ; ಏನಿದರ ಉದ್ದೇಶ? ಅರ್ಜಿ ಸಲ್ಲಿಸುವುದು ಹೇಗೆ?

Krishi Bhagya Yojana : ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿಸಲು ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ (Krishi Bhagya Yojana) ಯನ್ನು ಜಾರಿಗೆ ತರಲಾಗಿದೆ. ಈ  ಯೋಜನೆಯಡಿಯಲ್ಲಿ ರೈತರಿಗೆ ಶೇ. 90ರಷ್ಟು ಸಹಾಯಧನ…

Krishi Bhagya Yojana : ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿಸಲು ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ (Krishi Bhagya Yojana) ಯನ್ನು ಜಾರಿಗೆ ತರಲಾಗಿದೆ. ಈ  ಯೋಜನೆಯಡಿಯಲ್ಲಿ ರೈತರಿಗೆ ಶೇ. 90ರಷ್ಟು ಸಹಾಯಧನ ಸಿಗಲಿದೆ. 

ಹೌದು, ಒಣ ಭೂಮಿಯ ರೈತರು ಬೇಸಾಯಕ್ಕೆ ಮಳೆ ನೀರು ಸಂಗ್ರಹಿಸಲು ಅವಕಾಶ, ಕೃಷಿ ಹೊಂಡ ನಿರ್ಮಿಸಿ, ನೀರು ಎತ್ತಲು ಡೀಸೆಲ್‌ ಪಂಪ್‌ಸೆಟ್‌ ಅಳವಡಿಸಿ, ತುಂತುರು ನೀರಾವರಿ ವ್ಯವಸ್ಥೆ, ನೀರು ಇಂಗದಂತೆ ಪಾಲಿಥಿನ್‌ ಶೀಟ್‌ ಅಳವಡಿಕೆ, ಕೃಷಿ ಹೊಂಡದ ಸುತ್ತ ತಂತಿ ಬೇಲಿ ಅಳವಡಿಕೆಗೆ ಕೃಷಿ ಭಾಗ್ಯ ಯೋಜನೆಯಡಿ ನೆರವು ಸಿಗಲಿದೆ.

ಕೃಷಿ ಚಟುವಟಿಕೆಗಳಿಗೆ ನೆರವಾಗಲಿದೆ Krishi Bhagya Yojana

ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ ಕೃಷಿ ಚಟುವಟಿಕೆಗಳಿಗೆ ನೆರವಾಗುವಂತೆ ಬೆಳೆಗಳ ಸಂದಿಗ್ದ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಮುಖ್ಯ ಗುರಿಯಾಗಿರುತ್ತದೆ.

Vijayaprabha Mobile App free

Krishi Bhagya Yojana

ಇನ್ನು, 2023-24ನೇ ರಲ್ಲಿ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಪ್ಯಾಕೇಜ್‌ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಬರಪೀಡಿತ ಪ್ರದೇಶದಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕತೆ ಹೆಚ್ಚಿಸಲು ರೈತರಿಗೆ ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ.

ಇದನ್ನೂ ಓದಿ: DAP fertilizer | ರೈತರಿಗೆ ಶುಭ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; 1350 ರೂಗೆ ಡಿಎಪಿ..!

ಕೃಷಿ ಭಾಗ್ಯ ಯೋಜನೆಯ ಉದ್ದೇಶ (Objective of krishi bhagya yojana)

Krishi Bhagya Yojana

  • ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು.
  • ಕೃಷಿಯಿಂದ ರೈತರ ಆದಾಯ ಹೆಚ್ಚಿಸುವುದು.
  • ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದು.
  • ಸಮರ್ಪಕವಾಗಿ ಮಳೆ ನೀರಿನ ಸಂಗ್ರಹಣೆ ಮಾಡುವುದು.
  • ಶೇಖರಣೆಯಾದ ನೀರನ್ನು ಉಪಯುಕ್ತವಾಗಿ ಬಳಸುವುದು.

ಇದನ್ನೂ ಓದಿ: Fasal bima yojana | ಫಸಲ್‌ ಭೀಮಾ ಯೋಜನೆ ಫಲಾನುಭವಿ ರೈತರಿಗೆ ಸಿಹಿ ಸುದ್ದಿ

ಕೃಷಿ ಭಾಗ್ಯ ಯೋಜನೆಯಡಿ ಎಷ್ಟು ಸಹಾಯಧನ ಸಿಗಲಿದೆ?

  • ಕೃಷಿ ಹೊಂಡ ನಿರ್ಮಿಸಲು 70%-90% ಸಹಾಯಧನ ಸಿಗಲಿದೆ.
  • ಕೃಷಿಹೊಂಡದ ಸುತ್ತ ತಂತಿಬೇಲಿಗಾಗಿ 75%ರಷ್ಟು ಸಹಾಯಧನ.
  • ಪಾಲಿಥಿನ್ ಹೊದಿಕೆಗೆ ಸರ್ಕಾರ ಆಯಾ ಸಂಸ್ಥೆಗೆ ಪಾವತಿ ಮಾಡುತ್ತದೆ.
  • ಪಂಪ್ ಸೆಟ್ ಗೋಸ್ಕರ 30,000 ರೂಪಾಯಿ ಸಹಾಯಧನ ಸಿಗುತ್ತದೆ.

ಕೃಷಿ ಭಾಗ್ಯ ಯೋಜನೆಯ ಸೌಲಭ್ಯ ಪಡೆಯಲು ಯಾರು ಅರ್ಜಿ ಸಲ್ಲಿಸಬಹುದು? 

ಕೃಷಿ ಭಾಗ್ಯ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯದ ಯಾವುದೇ ರೈತರು ಕನಿಷ್ಠ 1 ಎಕರೆ ಜಮೀನನ್ನು ಹೊಂದಿರಬೇಕು. ಆದರೆ ಕೃಷಿ ಭಾಗ್ಯ ಯೋಜನೆಯಡಿ ಸವಲತ್ತು ಪಡೆದಿರುವ ರೈತರು ಹಾಗೂ ನರೇಗಾ ಯೋಜನೆಯಡಿ ಸವಲತ್ತು ಪಡೆದಿರುವ ರೈತರನ್ನು ಹೊರತುಪಡಿಸಿ ಉಳಿದ ಎಲ್ಲಾ ರೈತ ಬಾಂಧವರು ಅರ್ಜಿ ಸಲ್ಲಿಸಬಹುದು. ರೈತರ ಅವಶ್ಯಕತೆಗೆ ಅನುಗುಣವಾಗಿರುವ ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುತ್ತದೆ. ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರಕಾರ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದು ರೈತರಿಗೆ ವರದಾನವಾಗಿದೆ.

ಇದನ್ನೂ ಓದಿ: New rules | ದೇಶದಲ್ಲಿ ಇಂದಿನಿಂದ ಹೊಸ ನಿಯಮಗಳು; ಇಂದು ಏನೆಲ್ಲಾ ಬದಲಾವಣೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು (krishi bhagya yojana documents)

ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ, ಅರ್ಜಿಯ ಜತೆ ಎಫ್‌ಐಡಿ, ರೈತರ ಭಾವಚಿತ್ರ ಇರಬೇಕು. ಫ್ರೂಟ್ಸ್‌ ಐಡಿ ಇರದಿದ್ದರೆ, ಆಧಾರ್‌ ಪ್ರತಿ, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್‌ ಪಾಸ್‌ಬುಕ್‌ ಪ್ರತಿ ಇರಬೇಕು. ಜ್ಯೇಷ್ಠತಾ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇನ್ನು, ಆಯಾ ತಾಲೂಕಿನ ಸಂಬಂದಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಯೋಜನೆಯ ಪೂರ್ಣ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.

ಕೃಷಿ ಭಾಗ್ಯ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? (krishi bhagya yojana application)

ರಾಜ್ಯ ಸರ್ಕಾರದಿಂದ ಮರುಚಾಲನೆಯಾದ ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ರೈತರು ತಮ್ಮ ಹತ್ತಿರದ ಹೋಬಳಿಯ ಕೃಷಿ ಕಚೇರಿಗೆ ಹೋಗಿ ಬೇಕಾಗುವಂತಹ ದಾಖಲಾತೆ ಜೊತೆಗೆ ಅರ್ಜಿಯನ್ನು ಸಲ್ಲಿಸಬಹುದು. https://raitamitra.karnataka.gov.in/ ಈ ಒಂದು ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅಗತ್ಯವಿರುವ ದಾಖಲಾತಿಗಳನ್ನು  ಸಲ್ಲಿಸಬೇಕು.
ಕೃಪೆ: Krushi Madyama ಕೃಷಿ ಮಾಧ್ಯಮ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.