ಸುಕನ್ಯಾ ಸಮೃದ್ಧಿ ಖಾತೆಯನ್ನು ಒಂದು ಬ್ಯಾಂಕ್‌ನಿಂದ ಇನ್ನೊಂದು ಬ್ಯಾಂಕ್‌ಗೆ ವರ್ಗಾಯಿಸುವುದು ಹೇಗೆ? ಇಲ್ಲಿದೆ ನೋಡಿ

post office scheme vijayaprabha post office scheme vijayaprabha

ಸುಕನ್ಯಾ ಸಮೃದ್ಧಿ ಯೋಜನೆಯೊಂದಿಗೆ ನೀವು ತೆರಿಗೆ ವಿನಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಸೆಕ್ಷನ್ 80ಸಿ ಅಡಿಯಲ್ಲಿ ವಾರ್ಷಿಕ ರೂ 1.5 ಲಕ್ಷದವರೆಗೆ ತೆರಿಗೆ ವಿನಾಯಿತಿ ಇದೆ. ಮೆಚ್ಯೂರಿಟಿಯಲ್ಲಿ ದೊಡ್ಡ ಮೊತ್ತವನ್ನೂ ಪಡೆಯಬಹುದು. ಇನ್ನು, ಈ ಯೋಜನೆಯು ಇತರ ಸಣ್ಣ ಉಳಿತಾಯ ಯೋಜನೆಗಳಿಗಿಂತ ಹೆಚ್ಚಿನ ಬಡ್ಡಿದರವನ್ನು ನೀಡುತ್ತದೆ. ಅಲ್ಲದೆ ಈ ಯೋಜನೆಯಲ್ಲಿರುವ ಹಣವನ್ನು ಹೆಣ್ಣು ಮಕ್ಕಳ ಉನ್ನತ ವ್ಯಾಸಂಗ ಅಥವಾ ಮದುವೆಗೆ ಬಳಸಬಹುದು. ಅಲ್ಲದೆ ನೀವು ಹೂಡಿದ ಹಣಕ್ಕೆ ಸಂಪೂರ್ಣ ಭದ್ರತೆ ಇರುತ್ತದೆ. ಮೋಸ ಹೋಗುವ ಕೆಲಸವಿಲ್ಲ.

ನೀವು ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ಗೆ ಹೋಗಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯನ್ನು ತೆರೆಯಬಹುದು. ಮಗುವಿನ ಜನನ ಪ್ರಮಾಣಪತ್ರ, ಆಧಾರ್ ಕಾರ್ಡ್, ಫೋಟೋಗಳು ಕಡ್ಡಾಯವಾಗಿದೆ. ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆ ಮತ್ತು ಫೋಟೋಗಳನ್ನು ಸಹ ನೀವು ಒದಗಿಸಬೇಕಾಗುತ್ತದೆ. ಯೋಜನೆಗೆ ಸೇರುವವರು ವರ್ಷಕ್ಕೆ ಗರಿಷ್ಠ 1.5 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಒಂದು ವರ್ಷದಲ್ಲಿ ರೂ.250 ಜಮಾ ಮಾಡಿದರೂ ಖಾತೆ ಮುಂದುವರಿಯುತ್ತದೆ. ಪ್ರತಿ ತಿಂಗಳು ನಿರ್ದಿಷ್ಟ ಮೊತ್ತವನ್ನು ಠೇವಣಿ ಮಾಡಿ ನೀವು ಉತ್ತಮ ಲಾಭವನ್ನು ಪಡೆಯಬಹುದು.

ನೀವು ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯನ್ನು ಒಂದು ಬ್ಯಾಂಕ್‌ನಿಂದ ಇನ್ನೊಂದು ಬ್ಯಾಂಕ್‌ಗೆ ಸುಲಭವಾಗಿ ವರ್ಗಾಯಿಸಬಹುದು. ಐಸಿಐಸಿಐ ಬ್ಯಾಂಕ್ ವೆಬ್‌ಸೈಟ್ ಪ್ರಕಾರ, ಗ್ರಾಹಕರು ಬ್ಯಾಂಕ್‌ಗೆ ಹೋಗಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ವರ್ಗಾವಣೆ ವಿನಂತಿಯನ್ನು ಮಾಡಬೇಕು. ಇಲ್ಲಿ ನೀವು ICICI ಬ್ಯಾಂಕ್ ಶಾಖೆಯ ವಿವರಗಳನ್ನು ಒದಗಿಸಬೇಕು. ಈಗ ನಿಮ್ಮ ಬ್ಯಾಂಕ್ ನಿಮಗೆ ಖಾತೆಯ ಪ್ರಮಾಣೀಕೃತ ಪ್ರತಿ, ಖಾತೆ ತೆರೆಯುವ ಅರ್ಜಿ, ಡಿಡಿ ಅಥವಾ ಚೆಕ್‌ನಂತಹ ದಾಖಲೆಗಳನ್ನು ಒದಗಿಸುತ್ತದೆ. ಇವುಗಳನ್ನು ಐಸಿಐಸಿಐ ಬ್ಯಾಂಕ್ ಗೆ ನೀಡಿದರೆ ಸಾಕು. ಪರ್ಯಾಯವಾಗಿ ಬ್ಯಾಂಕ್ ಈ ದಾಖಲೆಗಳನ್ನು ನೇರವಾಗಿ ICICI ಗೆ ಕಳುಹಿಸಬಹುದು.

Advertisement

ಬಹುತೇಕ ಎಲ್ಲಾ ಬ್ಯಾಂಕುಗಳು ಇದೇ ಪ್ರಕ್ರಿಯೆಯನ್ನು ಹೊಂದಿವೆ. ನಿಮ್ಮ ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯನ್ನು ಯಾವುದೇ ಬ್ಯಾಂಕ್‌ಗೆ ಬದಲಾಯಿಸಲು ನೀವು ಬಯಸಿದರೆ, ನೀವು ಅಲ್ಲಿಗೆ ಹೋಗಿ ಮತ್ತೆ ಹೊಸ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಇತರ ಅಗತ್ಯವಿರುವ KYC ದಾಖಲೆಗಳನ್ನು ಸಲ್ಲಿಸಬೇಕು. ನಂತರ ನಿಮ್ಮ ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯು ಹೊಸ ಬ್ಯಾಂಕ್‌ನಲ್ಲಿ ಸಕ್ರಿಯಗೊಳ್ಳುತ್ತದೆ. ಈ ಮೂಲಕ ನೀವು ಸುಕನ್ಯಾ ಖಾತೆಯನ್ನು ಒಂದು ಬ್ಯಾಂಕ್‌ನಿಂದ ಇನ್ನೊಂದು ಬ್ಯಾಂಕ್‌ಗೆ ವರ್ಗಾಯಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement