Hrudaya Jyothi: ಹೃದಯಗೆದ್ದ ಹೃದಯಜ್ಯೋತಿ!

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯ ಅಡಿಯಲ್ಲಿ ಹೃದಯಾಘಾತಕ್ಕೆ ಒಳಗಾದವರಿಗೆ ನೀಡುತ್ತಿರುವ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು ಉಳಿಸಿದೆ.  ‘ಟೆನೆಕ್ಟ್‌ ಪ್ಲಸ್‌ʼ ಚುಚ್ಚುಮದ್ದನ್ನು…

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯ ಅಡಿಯಲ್ಲಿ ಹೃದಯಾಘಾತಕ್ಕೆ ಒಳಗಾದವರಿಗೆ ನೀಡುತ್ತಿರುವ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು ಉಳಿಸಿದೆ. 

‘ಟೆನೆಕ್ಟ್‌ ಪ್ಲಸ್‌ʼ ಚುಚ್ಚುಮದ್ದನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದ್ದು, ಈ ಚುಚ್ಚುಮದ್ದಿಗೆ  30,000 ದರವಿದ್ದು, ಕಾಂಗ್ರೆಸ್ ಸರ್ಕಾರ ಉಚಿತವಾಗಿ ನೀಡುತ್ತಿದೆ.

ಈಗಾಗಲೇ 5,000ಕ್ಕೂ ಹೆಚ್ಚು ತೀವ್ರ ಹೃದಯರೋಗಿಗಳನ್ನು ಪತ್ತೆ ಹಚ್ಚಿ, 3,000ಕ್ಕೂ ಹೆಚ್ಚು ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ಒದಗಿಸಲಾಗಿದೆ. ಈ ಮೂಲಕ ಹೃದಯ ಜ್ಯೋತಿ ಯೋಜನೆ ಜನಸಾಮಾನ್ಯರ ಹೃದಯ ಗೆದ್ದ ಯೋಜನೆಯಾಗಿ ಯಶಸ್ವಿಯಾಗಿದೆ. ಈ ಕುರಿತು ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದ್ದು ಸಂತಸ ವ್ಯಕ್ತಪಡಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.