BREAKING: LPG ಸಿಲಿಂಡರ್ ಬೆಲೆ ಭಾರಿ ಇಳಿಕೆ!; ಇಂದಿನಿಂದಲೇ ಅನ್ವಯ

ದೇಶಿಯ ಮಾರುಕಟ್ಟೆಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆಯಾಗಿದ್ದು, ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್ ವಾಣಿಜ್ಯ ಬಳಕೆಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಸುಮಾರು ₹36.50 ಕಡಿತಗೊಳಿಸಿದೆ. ನೂತನ ದರಗಳು ಇಂದಿನಿಂದ…

Indane gas vijayaprabha

ದೇಶಿಯ ಮಾರುಕಟ್ಟೆಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆಯಾಗಿದ್ದು, ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್ ವಾಣಿಜ್ಯ ಬಳಕೆಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಸುಮಾರು ₹36.50 ಕಡಿತಗೊಳಿಸಿದೆ.

ನೂತನ ದರಗಳು ಇಂದಿನಿಂದ ಅನ್ವಯವಾಗಲಿದ್ದು, ದರ ಕಡಿತದ ನಂತರ ಪ್ರತಿ ಸಿಲಿಂಡರ್‌ಗೆ 1976.50 ರೂ. ಆಗಿದೆ. ಇದೀಗ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ ₹2012.50 ರಿಂದ ₹1976.50ಕ್ಕೆ ಆಗಿದ್ದು, ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ 36.50 ರೂ. ಇಳಿಕೆಯಾಗಿ, ಪ್ರತಿ ಸಿಲಿಂಡರ್‌ಗೆ 2095.50 ರೂ. ಆಗಿದೆ.

ಆದರೆ, ಗೃಹೋಪಯೋಗಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಸದ್ಯ 14 ಕೆಜಿ ಸಿಲಿಂಡರ್ ಬೆಲೆ ₹1068.50 ಇದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.