ಬೆಂಗಳೂರು : ನವಂಬರ್ 3 ರಂದು ಆರ್ ಆರ್ ನಗರ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನ ಹಾಗು ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಪಕ್ಷ ಹಾಗೂ ನಿರ್ಮಾಪಕರು ಎಂದಲ್ಲ, ನಾನು ವ್ಯಕ್ತಿ ನೋಡಿ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.
ಆರ್.ಆರ್ ನಗರ ಅಭ್ಯರ್ಥಿ ಮುನಿರತ್ನ ಅವರ ಪರ ಪ್ರಚಾರಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುನಿರತ್ನ ಅವರು ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಕ್ಷೇತ್ರದ ಜನತೆಗೆ ದಿನಸಿ ವಿತರಿಸುವ ಮೂಲಕ ಸಾಕಷ್ಟು ಸಹಾಯ ಮಾಡಿದ್ದಾರೆ. ಹೀಗಾಗಿ ಮಾನವೀಯತೆ ದೃಷ್ಟಿಯಿಂದ ನಾನು ಅವರ ಪರ ಪ್ರಚಾರಕ್ಕೆ ತೆರಳುತ್ತಿದ್ದೇನೆ ಎಂದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.