ವಿಜಯಪುರ: ಕಾಂಗ್ರೆಸ್ ಪಕ್ಷ ಬಿಡೋರ ಲಿಸ್ಟ್ ನನ್ನ ಬಳಿ ಇದೆ. ಹಾಗೇಯೇ ಬಿಜೆಪಿ ಪಕ್ಷ ಬಿಡೋರ ಲಿಸ್ಟ್ ಕೂಡ ನನ್ನ ಬಳಿಯಿದ್ದು, ಕಾಲಕಾಲಕ್ಕೆ ಹೇಳ್ತೀನಿ ಎಂದು ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಅವರು, ಚುನಾವಣೆ 6 ತಿಂಗಳು ಇರುವಾಗ ಸಂಪುಟ ಪುನರ್ ರಚನೆ ಮಾಡಿದರೆ ನಾವ್ಯಾರು ಮಂತ್ರಿ ಆಗುವುದಿಲ್ಲ. ಆದಷ್ಟು ಬೇಗ ಸಂಪುಟ ಪುನರ್‍ರಚನೆ ವಿಶ್ವಾಸಯಿದ್ದು, ಸಿಎಂ ಅವರು ಪ್ರಧಾನಿಗಳನ್ನು ಭೇಟಿ ಮಾಡಬೇಕು.
ಇನ್ನು, ಪಂಚರಾಜ್ಯ ಚುನಾವಣೆಯಿದ್ದು, ನಾಳೆ ಸಿಎಂ ಬೊಮ್ಮಾಯಿ ಅವರು ದೆಹಲಿಗೆ ಹೊರಟಿದ್ದಾರೆ. ಅಲ್ಲಿಯೇ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ಮಾಡಬಹುದು. ಯಾವಾಗ ಆಗುತ್ತೋ ಆಗಲಿ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.