Champions Trophy | ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಫೆಬ್ರವರಿ 23 ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

Champions Trophy : ಹೈಬ್ರಿಡ್ ಮಾದರಿಯಲ್ಲಿ 2025ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದ್ದು, ಟೂರ್ನಿಯ ಹೈವೋಲ್ಟೇಜ್ ಕದನವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ದುಬೈನಲ್ಲಿ ಫೆಬ್ರವರಿ 23 ರಂದು…

Champions Trophy schedule

Champions Trophy : ಹೈಬ್ರಿಡ್ ಮಾದರಿಯಲ್ಲಿ 2025ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದ್ದು, ಟೂರ್ನಿಯ ಹೈವೋಲ್ಟೇಜ್ ಕದನವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ದುಬೈನಲ್ಲಿ ಫೆಬ್ರವರಿ 23 ರಂದು ನಡೆಯಲಿದೆ.

ಹೌದು, ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಈ ಟೂರ್ನಿಯು ಫೆ.19 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ನಡುವೆ ನಡೆಯಲಿದೆ. ಮಾರ್ಚ್ 9 ರಂದು ಫೈನಲ್ ನಡೆಯಲಿದೆ. ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಇಡೀ ಟೂರ್ನಿಯ ಹೈವೋಲ್ಟೇಜ್ ಕದನವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ದುಬೈನಲ್ಲಿ ಫೆಬ್ರವರಿ 23 ರಂದು ನಡೆಯಲಿದೆ.

ಇದನ್ನೂ ಓದಿ: Ravichandran Ashwin | ಭಾರತದ ಸ್ಪಿನ್ ಮಾಂತ್ರಿಕ ಅಶ್ವಿನ್ ಬಗ್ಗೆ ತಿಳಿದುಕೊಳ್ಳಬೇಕಾದ ವಿಶೇಷ ವಿಷಯಗಳು

Vijayaprabha Mobile App free

Champions Trophy: ಗಮನಿಸಬೇಕಾದ ಪ್ರಮುಖ ಅಂಶಗಳು

  • ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳಿದ್ದರೆ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ & ಇಂಗ್ಲೆಂಡ್ ಬಿ ಗುಂಪಿನಲ್ಲಿವೆ.
  • ಭಾರತ ತಂಡ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
  • ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ಯಾವುದೇ ಮೀಸಲು ದಿನವನ್ನು ಇರಿಸಲಾಗಿಲ್ಲ.
  • ಚಾಂಪಿಯನ್ಸ್ ಟ್ರೋಫಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿವೆ.
  • ಮಾ.9 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ: Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ನಿವೃತ್ತಿ!

Champions Trophy : ಟೀಂ ಇಂಡಿಯಾ ವೇಳಾಪಟ್ಟಿ

Champions Trophy schedule India and Pakistan match

ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಆಡಲಿದ್ದು, 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಟೀಂ ಇಂಡಿಯಾ ಪಾಕಿಸ್ತಾನ, ನ್ಯೂಜಿಲೆಂಡ್ & ಬಾಂಗ್ಲಾದೇಶದೊಂದಿಗೆ ಎ ಗುಂಪಿನಲ್ಲಿದೆ. ಗುಂಪು ಹಂತದಲ್ಲಿ ಈ ಮೂರು ತಂಡಗಳ ವಿರುದ್ಧ ತಲಾ ಒಂದು ಪಂದ್ಯವನ್ನು ಆಡಲಿದೆ.

ಫೆ.20 ರಿಂದ ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಅಭಿಯಾನ ಆರಂಭವಾಗಲಿದ್ದು, ರೋಹಿತ್ ಪಡೆ ತನ್ನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಎರಡನೇ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಫೆ.23ರಂದು ಆಡಲಿದೆ. ನಂತರ ಗುಂಪಿನ ಕೊನೆಯ ಪಂದ್ಯದಲ್ಲಿ, ಮಾ.2 ರಂದು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ: WPL Mini Auction | WPL ಮಿನಿ ಹರಾಜಿನಲ್ಲಿ ಮಾರಾಟವಾದ ಆಟಗಾರ್ತಿಯರ ಸಂಪೂರ್ಣ ಪಟ್ಟಿ

Champions Trophy : ಚಾಂಪಿಯನ್ಸ್ ಟ್ರೋಫಿಯ ಪೂರ್ಣ ವೇಳಾಪಟ್ಟಿ

ಚಾಂಪಿಯನ್ಸ್ ಟ್ರೋಫಿ 2025ರ ವೇಳಾಪಟ್ಟಿಯನ್ನು ICC ಪ್ರಕಟಿಸಿದೆ.

  • ಫೆಬ್ರವರಿ 19ಕ್ಕೆ PAK vs NZ,
  • ಫೆಬ್ರವರಿ 20ಕ್ಕೆ BAN vs IND,
  • ಫೆಬ್ರವರಿ 21ಕ್ಕೆ AFG vs SA,
  • 22ಕ್ಕೆ AUS vs ENG,
  • 23ಕ್ಕೆ PAK vs IND,
  • 24ಕ್ಕೆ BAN vs NZ,
  • 25ಕ್ಕೆ AUS vs SA,
  • 26ಕ್ಕೆ AFG vs ENG,
  • 27ಕ್ಕೆ PAK vs BAN,
  • 28ಕ್ಕೆ AFG vs AUS,
  • ಮಾರ್ಚ್ 1ಕ್ಕೆ SA vs ENG,
  • 2ಕ್ಕೆ NZ vs IND, 4 ರಂದು

ಇನ್ನು, ಸೆಮಿಫೈನಲ್-1, 5 ರಂದು ಸೆಮಿಫೈನಲ್ -2, 9 ರಂದು ಫೈನಲ್. ಹಾಗೂ 10 ರಂದು ರಿಸರ್ವ ಡೇ ಎಂದು ಪ್ರಕಟಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.