Bangla Immigrants: ಹಾಸನದಲ್ಲಿ ಮೂವರು ಬಾಂಗ್ಲಾ ವಲಸಿಗರ ಬಂಧನ!

ಹಾಸನ: ನಕಲಿ ಆಧಾರಕಾರ್ಡ್  ಬಳಸಿಕೊಂಡು ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಬಂಧಿತ ಬಾಂಗ್ಲಾ ವಲಸಿಗರಾಗಿದ್ದಾರೆ. ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ,…

ಹಾಸನ: ನಕಲಿ ಆಧಾರಕಾರ್ಡ್  ಬಳಸಿಕೊಂಡು ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಬಂಧಿತ ಬಾಂಗ್ಲಾ ವಲಸಿಗರಾಗಿದ್ದಾರೆ.

ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ, 4ನೇ ಅಡ್ಡರಸ್ತೆಯ ಜುಬೇರ್ ಎಂಬುವವರ ಮನೆಯಲ್ಲಿ ಮೂವರು ವಾಸವಿದ್ದರು. ಮೂವರೂ ವಲಸಿಗರು ಜುಬೇರ್ ಮನೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಪಶ್ಚಿಮ ಬಂಗಾಳದ ವಿಳಾಸವಿರುವ ನಕಲಿ ಆಧಾರಕಾರ್ಡ್ ಪಡೆದು ಮೂವರೂ ವಾಸ್ತವ್ಯ ಹೂಡಿದ್ದರು

ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದ ಜಿಲ್ಲಾ ಅಪರಾಧ ದಾಖಲೆಗಳ ದಳ(DCRB)ದ ಪೊಲೀಸರು ಮೂವರು ಬಾಂಗ್ಲಾ ನುಸುಳುಕೋರರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಮೂವರೂ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದಿರುವ ಪೊಲೀಸರು ಇದೇ ರೀತಿ ಬೇರೆ ಕಡೆಗಳಲ್ಲಿ ಇರಬಹುದಾದ ಬಾಂಗ್ಲಾ ವಲಸಿಗರ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.