Cyclone Dana : ಡಾನಾ ಚಂಡಮಾರುತ (Cyclone Dana) ದೇಶದ ಪೂರ್ವ ಕರಾವಳಿಗೆ ಅಪ್ಪಳಿಸುತ್ತಿದ್ದು, ಲ್ಯಾಂಡ್‌ಫಾಲ್ ಪ್ರಕ್ರಿಯೆ ಆರಂಭವಾಗಿದೆ.
ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯಲ್ಲಿ ಗಂಟೆಗೆ 100-110 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರದಲ್ಲಿ ರಕ್ಕಸ ಅಲೆಗಳು ಏಳುತ್ತಿವೆ. ಒಡಿಶಾದ ಭದ್ರಕ್‌ನ ಕಮಾರಿಯಾದಲ್ಲಿ ಬಿರುಗಾಳಿ ಮತ್ತು ಭಾರೀ ಮಳೆ ಅವಾಂತರ ಸೃಷ್ಟಿಸಿದ್ದು, ಹಲವೆಡೆ ಮರಗಳು ಉರುಳಿವೆ.
ಇದನ್ನೂ ಓದಿ: Anila Bhagya Yojana : ಬಿಪಿಎಲ್ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್; ಸಿಗುವ ಸೌಲಭ್ಯಗಳು, ಪಡೆಯುವ ವಿಧಾನ ಹೇಗೆ..?
ಇಂದಿನ ಹವಾಮಾನ ವರದಿ: ರಾಜ್ಯದಲ್ಲಿ ಚಂಡಮಾರುತದ (Cyclone Dana) ಪ್ರಭಾವ ಹೇಗಿದೆ?
ಇನ್ನು, ಕರ್ನಾಟಕದ ಹಲವು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಗೆ ಜನಜೀವನ ಹೈರಾಣಾಗಿದೆ. ಧಾರವಾಡ, ಹಾವೇರಿ, ಕಡೂರು, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಹಾವೇರಿ, ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದೆ.
ಚಂಡಮಾರುತದ ಪ್ರಭಾವದಿಂದಾಗಿ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದಲ್ಲಿ ಚಂಡಮಾರುತದ ಪ್ರಭಾವ ಕಡಿಮೆ ಎನ್ನಲಾಗಿದೆ. ಇನ್ನು, ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 24 ರಿಂದ ಅಕ್ಟೋಬರ್ 26 ರವರೆಗೆ ಒಣಹವೆ ಇರಲಿದೆ.