ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಲ್ಲ ಇಲಾಖೆಗಳ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಪಾವತಿಸುವಂತೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.
ಹೌದು, ಶೌಚಾಲಯಗಳು, ಸ್ನಾನಗೃಹಗಳು, ಒಳಚರಂಡಿಗಳನ್ನು ಶುಚಿ ಮಾಡುವ ಕೆಲಸಗಳಲ್ಲಿ ತೊಡುವವರಿಗೆ ಕನಿಷ್ಠ ವೇತನ ದರಗಳಂತೆ ಪಾವತಿಸುವಂತೆ ಇದಲ್ಲದೇ ಪ್ರತಿ ವರ್ಷ ಏಪ್ರಿಲ್‌ನಲ್ಲಿ ಏರಿಕೆಯಾಗುವ ವ್ಯತ್ಯಸ್ಥ ತುಟ್ಟಿಭತ್ಯೆ ದರಗಳನ್ನು ಸೇರಿಸಿ ಪಾವತಿಸಬೇಕು ಎಂದು ರಾಜ್ಯ ಕಾರ್ಮಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ
ಇನ್ನು, ದಿನಕ್ಕೆ 8 ಗಂಟೆಗಳ ಕೆಲಸಕ್ಕಾಗಿ ಕನಿಷ್ಠ ವೇತನವಿದೆ. ಇದಕ್ಕಿಂತ ಹೆಚ್ಚು ಕೆಲಸ ಮಾಡಿದಲ್ಲಿ, ಹೆಚ್ಚುವರಿ ವೇತನ ನೀಡಬೇಕು. ಪ್ರತಿ ತಿಂಗಳು 5ನೇ ತಾರೀಖಿನೊಳಗೆ ನೌಕರರ ಬ್ಯಾಂಕ್ ಖಾತೆಗೆ ವೇತನದ ಹಣ ಜಮೆ ಮಾಡಬೇಕು’ ಎಂದು ಸೂಚಿಸಿದೆ.