ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ ಸಿಕ್ಕಿದೆ. ತುಟ್ಟಿಭತ್ಯೆ ಹೆಚ್ಚಿಸುವಂತೆ ನೌಕರರು ಕೆಲ ದಿನಗಳಿಂದ ಒತ್ತಾಯಿಸುತ್ತಿದ್ದು, ನೌಕರರ ಕನಿಷ್ಠ ವೇತನ ಹಾಗು ತುಟ್ಟಿಭತ್ಯೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ನೌಕರರ ಕನಿಷ್ಠ ವೇತನ 18 ಸಾವಿರ ರೂ.ನಿಂದ 26 ಸಾವಿರ ರೂ.ಗೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ನೌಕರರ ತುಟ್ಟಿಭತ್ಯೆ ಶೇ.38ರಿಂದ 42ಕ್ಕೆ ಏರಿಕೆಯಾಗಲಿದೆ ಎಂದು ವರದಿಯಾಗಿದೆ. ಇದರೊಂದಿಗೆ ಪ್ರಸ್ತುತ ಮೊತ್ತ ರೂ.6,840ರಿಂದ ರೂ.7,560ಕ್ಕೆ ಏರಿಕೆಯಾಗಲಿದೆ. ಮಾರ್ಚ್ 15ಕ್ಕೆ ರಿಲೀಸ್ ಆಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.