ನವದೆಹಲಿ: ದೇಶದ 17 ರಾಜ್ಯಗಳಲ್ಲಿ ‘ಒನ್ ನೇಷನ್ ಒನ್ ರೇಷನ್ ಕಾರ್ಡ್ ವ್ಯವಸ್ಥೆ’ ಕಾರ್ಯರೂಪಕ್ಕೆ ಬಂದಿದ್ದು, ಈ ಸುಧಾರಣೆಯನ್ನು ಪೂರ್ಣಗೊಳಿಸಿದ ಮೊದಲ ರಾಜ್ಯವಾಗಿ ಉತ್ತರಾಖಂಡ ಹೊರಹೊಮ್ಮಿದೆ.
ಒನ್ ನೇಷನ್ ಒನ್ ರೇಷನ್ ಕಾರ್ಡ್ ವ್ಯವಸ್ಥೆಯನ್ನು ಇದೀಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಜಾರಿಗೆ ತರಲಾಗುತ್ತಿದ್ದು, ಇದರಿಂದ ರಾಜ್ಯಗಳಿಗೆ ₹37,600 ಕೋಟಿ ರೂಪಾಯಿ ಹೆಚ್ಚುವರಿ ಸಾಲ ಪಡೆಯುವ ಅನುಮತಿಯನ್ನು ಕೇಂದ್ರ ಹಣಕಾಸು ಸಚಿವಾಲಯ ನೀಡಿದೆ.
ಇನ್ನು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯಿಂದ ವಿಶೇಷವಾಗಿ ವಲಸಿಗರು, ದಿನಗೂಲಿ ಕಾರ್ಮಿಕರಿಗೆ ಲಾಭವಾಗಲಿದ್ದು, ಅವರು ಇದ್ದಲ್ಲಿಯೇ ಪಡಿತರ ಸೌಲಭ್ಯವನ್ನು ಪಡೆಯಲಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.