ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರಿ ಮಳೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ!

ಬೆಂಗಳೂರು: ಕೇರಳಕ್ಕಿಂದು ಮಾನ್ಸೂನ್ ಮಾರುತಗಳು ಪ್ರವೇಶಿಸಿದ್ದು, ರಾಜ್ಯಕ್ಕೆ ಜೂನ್ 5, 6ರಂದು ಪ್ರವೇಶಿಸುವ ಸಾಧ್ಯತೆಯಿದ್ದು, ಮಾನ್ಸೂನ್ ಪ್ರಭಾವದಿಂದ 18 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ…

rain vijayaprabha news

ಬೆಂಗಳೂರು: ಕೇರಳಕ್ಕಿಂದು ಮಾನ್ಸೂನ್ ಮಾರುತಗಳು ಪ್ರವೇಶಿಸಿದ್ದು, ರಾಜ್ಯಕ್ಕೆ ಜೂನ್ 5, 6ರಂದು ಪ್ರವೇಶಿಸುವ ಸಾಧ್ಯತೆಯಿದ್ದು, ಮಾನ್ಸೂನ್ ಪ್ರಭಾವದಿಂದ 18 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ರಾಜ್ಯದ 3 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಣೆ:

Vijayaprabha Mobile App free

ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಇಂದು ಮಾಹಿತಿ ನೀಡಿದ್ದು, ದಕ್ಷಿಣ ಒಳನಾಡು & ಕರಾವಳಿ ಜಿಲ್ಲೆಗಳಲ್ಲಿ ಜೂ.5ರವರೆಗೆ ವ್ಯಾಪಕ ಮಳೆಯಾಗಲಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ವಿಜಯಪುರ ಸೇರಿ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿಯೂ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.