ಮೊದಲ ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ; ಎರಡನೇ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

ಮೆಲ್ಬೋರ್ನ್: ಇತ್ತೀಚೆಗೆ ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 8 ವಿಕೆಟ್‌ಗಳ ಸೋಲನುಭವಿಸಿದ್ದ, ಟೀಮ್ ಇಂಡಿಯಾ ಮೆಲ್ಬೋರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 8 ವಿಕೆಟ್‌ಗಳ ಗೆಲುವು ದಾಖಲಿಸಿದ್ದು, ನಾಲ್ಕು ಪಂದ್ಯಗಳ…

India beat Australia second test vijayaprabha

ಮೆಲ್ಬೋರ್ನ್: ಇತ್ತೀಚೆಗೆ ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 8 ವಿಕೆಟ್‌ಗಳ ಸೋಲನುಭವಿಸಿದ್ದ, ಟೀಮ್ ಇಂಡಿಯಾ ಮೆಲ್ಬೋರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 8 ವಿಕೆಟ್‌ಗಳ ಗೆಲುವು ದಾಖಲಿಸಿದ್ದು, ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1ರಿಂದ ಸಮಬಲ ಸಾಧಿಸಿದೆ.

ಇಂದು ನಡೆದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 200 ರನ್‌ಗಳಿಗೆ ಆಲೌಟ್ ಆಗಿ, ಭಾರತಕ್ಕೆ 70 ರನ್‌ಗಳ ಸವಾಲು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಮಯಂಕ್ ಅಗರ್‌ವಾಲ್ (5, 15 ಎಸೆತ) ಆರಂಭದಲ್ಲಿಯೇ ವಿಕೆಟ್ ಕಳೆದುಕೊಂಡಿತು. ನಂತರ ಬಂದ ಚತೇಶ್ವರ ಪೂಜಾರ (3, 4 ಎಸೆತ) ಕೂಡ ನಿರಾಶೆ ಮೂಡಿಸಿದರು. ಆದರೆ ಕ್ಯಾಪ್ಟನ್ ಅಜಿಂಕ್ಯ ರಹಾನೆ (27*, 40 ಎಸೆತ) ಜೊತೆಗೆ ಓಪನರ್ ಶುಭಾಮನ್ ಗಿಲ್ (35*, 36 ಎಸೆತ) ಗೆಲುವಿನ ದಡ ಸೇರಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಅಜಿಂಕ್ಯ ರಹಾನೆ (112, 223 ಎಸೆತ) ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

ಮಂಗಳವಾರ ಎರಡನೇ ಇನ್ನಿಂಗ್ಸ್ ಅನ್ನು 133/6 ರ ಸ್ಕೋರ್ನೊಂದಿಗೆ ಮುಂದುವರೆಸಿದ ಆಸ್ಟ್ರೇಲಿಯಾ, ಕ್ಯಾಮರೂನ್ ಗ್ರೀನ್ (45, 146 ಎಸೆತ) ಮತ್ತು ಪ್ಯಾಟ್ ಕಮ್ಮಿನ್ಸ್ (22, 103 ಎಸೆತ) ಮೊದಲ ಸೆಷನ್‌ನಲ್ಲಿ ಭಾರತೀಯ ಬೌಲರ್‌ಗಳ ತಾಳ್ಮೆಯನ್ನು ಪರೀಕ್ಷಿಸಿದರು. ಆದರೆ ತಂಡದ ಸ್ಕೋರ್ 156 ಆಗಿದ್ದಾಗ ಪ್ಯಾಟ್ ಕಮ್ಮಿನ್ಸ್ ಅವರನ್ನು ಬುಮ್ರಾ ಔಟ್ ಮಾಡಿದರೆ, ಗ್ರೀನ್ ಅವರನ್ನು ಮೊಹಮ್ಮದ್ ಸಿರಾಜ್ ಪೆವಿಲಿಯನ್ ದಾರಿ ತೋರಿಸಿದರು. ಇನ್ನು ಇಲ್ಲಿಂದ ಆಸ್ಟ್ರೇಲಿಯಾದ ಪತನ ಆರಂಭವಾಯಿತು. ನಾಥನ್ ಲಿಯಾನ್ (3), ಜೋಶ್ ಹೆಜೆಲ್ ವುಡ್ (10) ಹಾಗು ಮಿಚೆಲ್ ಸ್ಟಾರ್ಕ್ (14*, 56 ಎಸೆತಗಳು) ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ಇರಲು ಸಾಧ್ಯವಾಗಲಿಲ್ಲ. ಭಾರತದ ಪರ ಮೊಹಮ್ಮದ್ ಸಿರಾಜ್ ಮೂರು ವಿಕೆಟ್ ಪಡೆದರೆ, ಬುಮ್ರಾ, ಅಶ್ವಿನ್ ಮತ್ತು ಜಡೇಜಾ ಎರಡು ಮತ್ತು ಉಮೇಶ್ ಯಾದವ್ ಒಂದು ವಿಕೆಟ್ ಪಡೆದರು.

Vijayaprabha Mobile App free

ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲ ಬ್ಯಾಟಿಂಗ್‌ಗೆ ಆಯ್ಕೆ ಮಾಡಿ, ಮೊದಲ ಇನ್ನಿಂಗ್ಸ್‌ನಲ್ಲಿ 195 ರನ್ ಗಳಿಸಿತು.ಆದರೆ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 326 ರನ್ ಗಳಿಸಿತ್ತು. ಮೂರನೇ ಟೆಸ್ಟ್ ಜನವರಿ 7 ರಿಂದ ಆರಂಭವಾಗಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.