ಅಶ್ವಿನ್, ಅಕ್ಷರ್ ಸ್ಪಿನ್ ಮ್ಯಾಜಿಕ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ10 ವಿಕೆಟ್ ಭರ್ಜರಿ ಗೆಲುವು

ಅಹ್ಮದಾಬಾದ್ : ಅಹ್ಮದಾಬಾದ್ ನಲ್ಲಿ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಹಗಲಿರುಳು ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.   ಮೊದಲ ಇನ್ನಿಂಗ್ಸ್…

ಅಹ್ಮದಾಬಾದ್ : ಅಹ್ಮದಾಬಾದ್ ನಲ್ಲಿ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಹಗಲಿರುಳು ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.

 

ಮೊದಲ ಇನ್ನಿಂಗ್ಸ್ ನಲ್ಲಿ 145 ರನ್ ಗಳಿಗೆ ಆಲೌಟ್ ಆಗಿ 33 ರನ್ ಗಳ ಅಲ್ಪ ರನ್ ಗಳ ಮುನ್ನಡೆ ಪಡೆಯಿತು. 33 ರನ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ಭಾರತದ ಸ್ಪಿನ್ ದಾಳಿಗೆ ನಲುಗಿ 81 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಗಿಯಿತು. ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಪರ ನಾಯಕ ರೂಟ್(19), ಸ್ಟೋಕ್ಸ್(25) & ಪೋಪ್(12) ಕೊಂಚ ನೆರವಾಗಿದ್ದು, ಉಳಿದೆಲ್ಲಾ ಆಟಗಾರರು ಎರಡಂಕಿ ದಾಟದೆ ಪೆವಿಲಿಯನ್ ಗೆ ಮರಳಿದರು. ಅತಿಥೇಯರ ಪರ ಅಕ್ಷರ್ ಪಟೇಲ್ 5, ರವಿಚಂದ್ರನ್ ಅಶ್ವಿನ್ 4 ವಿಕೆಟ್ ಹಾಗು ವಾಷಿಂಗ್ಟನ್ ಸುಂದರ್ 1 ಪಡೆದು ಮಿಂಚಿದರು.

Vijayaprabha Mobile App free

ಇನ್ನು 49 ರನ್ ಗಳ ಗುರಿ ಬೆನ್ನಟ್ಟಲು ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ನಿರಾಯಾಸವಾಗಿ ಗುರಿ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ, 4 ಟೆಸ್ಟ್ ಪಂದ್ಯಗಳ ಸರಣಿಯಿಂದ 3-1 ರ ಮುನ್ನಡೆ ಪಡೆಯಿತು. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಪರ ರೋಹಿತ್ ಶರ್ಮಾ 25, ಶುಭ್ಮನ್ ಗಿಲ್ 15 ರನ್ ಗಳಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.