ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,714 ಹೊಸ ಕೊರೋನಾ ಸೋಂಕಿನ ಪ್ರಕರಣಗಳು, 312 ಸಾವುಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 1,61,552ಕ್ಕೆ ತಲುಪಿದೆ.
ಇನ್ನು, ಕೊರೋನಾ ಸೋಂಕಿನಿಂದ ಕಳೆದ 28,739 ಮಂದಿ ಚೇತರಿಸಿಕೊಂಡಿದ್ದು, ಒಟ್ಟು 1,13,23762 ಜನರು ಗುಣಮುಖರಾಗಿದ್ದಾದ್ದು, ದೇಶದಲ್ಲಿ ಈವರೆಗೆ 6,02,69,782 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮಧ್ಯಪ್ರದೇಶದಲ್ಲಿ ಲಾಕ್‌ಡೌನ್, ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ:
ಇನ್ನು ಕೊರೋನಾ ಹಬ್ಬುವುದನ್ನು ತಡೆಯಲು ಮಧ್ಯಪ್ರದೇಶದ 12 ನಗರಗಳಲ್ಲಿ ಇಂದು ಲಾಕ್‌ಡೌನ್ ವಿಧಿಸಲಾಗಿದ್ದು, ಶನಿವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದೆ.
ಮಹಾರಾಷ್ಟ್ರದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಇನ್ನು, ದೇಶದಲ್ಲಿ ಆರು ರಾಜ್ಯಗಳಾದ ಮಹಾರಾಷ್ಟ್ರ, ಪಂಜಾಬ್, ಛತ್ತೀಸ್‌ಗಡ, ಕರ್ನಾಟಕ, ಗುಜರಾತ್ ಮತ್ತು ಮಧ್ಯಪ್ರದೇಶ ಅತಿಹೆಚ್ಚು ಕೊರೋನಾ ಪ್ರಕರಣಗಳು ವರದಿಯಾಗುತ್ತಿವೆ. ಇಲ್ಲಿ ಸುಮಾರು 79.5% ಪ್ರಕರಣಗಳು ದಾಖಲಾಗುತ್ತಿವೆ.