ಬೆಂಗಳೂರು: ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಕೇಂದ್ರ ಸರ್ಕಾರ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿದ ಹಿನ್ನಲೆ, ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಅಂತರ್ಜಾಲ ಸೇವೆ ಸ್ಥಗಿತಗೊಳಿಸುವಲ್ಲಿ ಅಗ್ರ ಸ್ಥಾನ ಪಡೆಯುವ ಮೂಲಕ ಕುಖ್ಯಾತಿ ಗಳಿಸಿದೆ ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ ಅವರು ಕಿಡಿಕಾರಿದ್ದಾರೆ.
ಈ ಕುರಿತು ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ ಇಂದು ಟ್ವೀಟ್ ಮಾಡಿದ್ದು, ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಅಂತರ್ಜಾಲ ಸೇವೆ ಸ್ಥಗಿತಗೊಳಿಸುವಲ್ಲಿ ಅಗ್ರ ಸ್ಥಾನ ಪಡೆಯುವ ಮೂಲಕ ಕುಖ್ಯಾತಿ ಗಳಿಸಿದೆ ಎಂದು ಟೀಕಿಸಿದ್ದಾರೆ. ಪ್ರಜಾಪ್ರಭುತ್ವದ ಹೆಸರಿನಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸುವ ಮೂಲಕ ವಾಕ್ ಸ್ವಾತಂತ್ರ್ಯ ತಡೆಯುತ್ತಾರೆ ಎಂದಾದರೆ ಇದು ಧರ್ಮಾಂಧತೆಯಲ್ಲವೇ?, ನರೇಂದ್ರ ಮೋದಿ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ, ಅವರ ಸರ್ಕಾರವು ಸತ್ಯಕ್ಕೆ ಅಂಜುತ್ತಿದೆ ಎಂದು ಆರೋಪಿಸಿದ್ದಾರೆ.
World’s Largest #democracy ranks 1st in Internet Shutdowns. It has become tool to curb speech of Public in India. Isn’t it’s bigotry in the name of democracy? @narendramodi government is afraid of the truth.
He is the weakest PM, India has ever seen. pic.twitter.com/nNJv8UP2n8
— Dr H.C.Mahadevappa (@CMahadevappa) February 7, 2021




