ಕೊಲೊಂಬೊ: ಟೀಮ್ ಇಂಡಿಯಾ ಆಟಗಾರ ಆಲ್ ರೌಂಡರ್ ಕೃನಾಲ್ ಪಾಂಡ್ಯ ಕೊರೋನಾ ಸೋಂಕಿಗೆ ತುತ್ತಾಗಿರುವ ಹಿನ್ನೆಲೆ ಭಾರತ-ಶ್ರೀಲಂಕಾ ಎರಡನೇ ಟಿ-20 ಪಂದ್ಯವನ್ನು ಮುಂದೂಡಲಾಗಿದೆ.
ಕೊಲಂಬೋದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ರಾತ್ರಿ 8ಕ್ಕೆ ನಡೆಯಬೇಕಿದ್ದ ಭಾರತ-ಶ್ರೀಲಂಕಾ ನಡುವಿನ 2ನೇ ಟಿ20 ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನು, ಕೃಣಾಲ್ ಪಾಂಡ್ಯ ಸಂಪರ್ಕಕ್ಕೆ ಬಂದಿದ್ದ ಟೀಮ್ ಇಂಡಿಯಾ ಆಟಗಾರರಾದ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಸೇರಿದಂತೆ ಒಟ್ಟು 8 ಜನ ಆಟಗಾರರನ್ನು ಐಸೋಲೇಷನ್ ನಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.