ಭುವಿ, ಬುಮ್ರಾ ಬೌಲಿಂಗ್ ದಾಳಿಗೆ ನಲುಗಿದ ಇಂಗ್ಲೆಂಡ್- ಸರಣಿ ವಶಪಡಿಸಿಕೊಂಡ ಭಾರತ

ಬರ್ಮಿಂಗ್‌ಹ್ಯಾಮ್‌: ರವೀಂದ್ರ ಜಡೇಜಾ ಬ್ಯಾಟಿಂಗ್ ಅಬ್ಬರ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್ ಬೌಲಿಂಗ್ ದಾಳಿಯಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ 49 ರನ್‌ಗಳಿಂದ ಭರ್ಜರಿ ಜಯಗಳಿಸಿದ್ದು, ಈ ಮೂಲಕ 2-0 ಅಂತರದಿಂದ…

ಬರ್ಮಿಂಗ್‌ಹ್ಯಾಮ್‌: ರವೀಂದ್ರ ಜಡೇಜಾ ಬ್ಯಾಟಿಂಗ್ ಅಬ್ಬರ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್ ಬೌಲಿಂಗ್ ದಾಳಿಯಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ 49 ರನ್‌ಗಳಿಂದ ಭರ್ಜರಿ ಜಯಗಳಿಸಿದ್ದು, ಈ ಮೂಲಕ 2-0 ಅಂತರದಿಂದ ಸರಣಿ ವಶಕ್ಕೆ ಪಡೆದುಕೊಂಡಿದೆ.

ಹೌದು, ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ರವೀಂದ್ರ ಜಡೇಜಾ 46 ರನ್ ಹಾಗೂ ರೋಹಿತ್ ಶರ್ಮಾ 31 ರನ್‌ಗಳ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತ್ತು.

ಬಳಿಕ 171 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 17 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿ 49 ರನ್ ಗಳ ಅಂತರದ ಸೋಲು ಒಪ್ಪಿಕೊಂಡಿತು. ಇಂಗ್ಲೆಂಡ್ ಪರ ಮೋಯಿನ್ ಅಲಿ 35 ರನ್ ಹಾಗೂ ಡೇವಿಡ್ ವಿಲ್ಲಿ 33 ರನ್ ಗಳಿಸಿದರು. ಇನ್ನು ಭಾರತದ ಪರ ಭುವನೇಶ್ವರ್ ಕುಮಾರ್ 3 ವಿಕೆಟ್, ಜಸ್ಪ್ರೀತ್ ಬುಮ್ರಾ ಹಾಗೂ ಯಜುವೇಂದ್ರ ಚಾಹಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ ಹಾಗೂ ಹರ್ಷಲ್ ಪಟೇಲ್ ತಲಾ 1 ವಿಕೆಟ್ ಕಿತ್ತು ಮಿಂಚಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.