ಬೆಂಗಳೂರು: ಚೀನಾದಲ್ಲಿ ಹರಡುತ್ತಿರುವ HMPV ವೈರಸ್ಗೆ ಭಾರತದ ಆರೋಗ್ಯ ಇಲಾಖೆ ಸ್ಪಂದಿಸಿದೆ. ಭಾರತದ ಜನರು ಚಿಂತಿಸಬೇಕಾಗಿಲ್ಲ, ಯಾರೂ ಭಯಪಡಬೇಕಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
HMPV ವೈರಸ್ ಇತರ ವೈರಸ್ಗಳಂತೆ ಶೀತ, ಕೆಮ್ಮು ಮತ್ತು ಜ್ವರವನ್ನು ಉಂಟುಮಾಡುತ್ತದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಡಿಜಿ ಡಾ. ಅತುಲ್ ಗೋಯಲ್ ಹೇಳಿದರು.
ಆಸ್ಪತ್ರೆಗಳಲ್ಲಿ ಹಾಸಿಗೆಗಳು ಮತ್ತು ಅಗತ್ಯ ಔಷಧಿಗಳ ಪೂರೈಕೆ ಸಾಕಷ್ಟಿದೆ. ಭಾರತೀಯ ಆರೋಗ್ಯ ಇಲಾಖೆಯು ನಿರಂತರವಾಗಿ ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ದೇಶದ ಜನರು ಯಾವುದೇ ಕಾರಣಕ್ಕೂ ಚಿಂತಿಸಬೇಕಾಗಿಲ್ಲ ಎಂದು ಅತುಲ್ ಗೋಯಲ್ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




