ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ಸೂಚನೆ; ವಿದ್ಯಾರ್ಥಿ ವೇತನ ಪಡೆಯಲು ಆಧಾರ್ ಜೋಡಣೆ ಮಾಡಿಸಿ

ದಾವಣಗೆರೆ ಜ.21 : ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಎಸ್.ಎಸ್.ಪಿ. (SSP) ಆನ್‍ಲೈನ್ ಮೂಲಕ ಅರ್ಜಿಗಳನ್ನು…

scholarship vijayaprabha

ದಾವಣಗೆರೆ ಜ.21 : ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಎಸ್.ಎಸ್.ಪಿ. (SSP) ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಸದರಿ ಸೌಲಭ್ಯವನ್ನು ವಿದ್ಯಾರ್ಥಿಯು ಹೊಂದಿರುವ ಬ್ಯಾಂಕ್ ಅಥವಾ ಪೋಸ್ಟಲ್ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಮಂಜೂರಾದ ಹಣವನ್ನು ಜಮೆ ಮಾಡಲಾಗುತ್ತದೆ.

2020-21ನೇ ಸಾಲಿಗೆ ಎಸ್.ಎಸ್.ಪಿ. ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೇರವಾಗಿ ವಿದ್ಯಾರ್ಥಿಗಳು ಹೊಂದಿರುವ ಬ್ಯಾಂಕ್ ಖಾತೆಗಳಿಗೆ ಮಂಜೂರಾದ ಮೊತ್ತ ಜಮೆಯಾಗಿರುತ್ತದೆ. ಆದರೆ ಕೆಲ ವಿದ್ಯಾರ್ಥಿಗಳು ಮಾತ್ರ ಬ್ಯಾಂಕ್ ಅಥವಾ ಪೋಸ್ಟಲ್ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೂ ಸಹ ಮಂಜೂರಾದ ಮೊತ್ತ ಜಮೆಯಾಗಿರುವುದಿಲ್ಲ. ಇಂತಹ ವಿದ್ಯಾರ್ಥಿಗಳು ತಾವು ಹೊಂದಿರುವ ಬ್ಯಾಂಕ್ ಖಾತೆಗಳೊಂದಿಗೆ ಆಧಾರ್ ಸೀಡಿಂಗ್ ಮೂಲಕ NPCI ಮಾಡಿಸದೇ ಇರುವುದರಿಂದ ಮಂಜೂರಾದ ಮೊತ್ತವು ಜಮೆಯಾಗಿರುವುದಿಲ್ಲ. ವಿದ್ಯಾರ್ಥಿಗಳು ಈ ಸೂಚನೆಯ ದಿನಾಂಕದಿಂದ ಮೂರು ದಿನದೊಳಗಾಗಿ ತಾವು ಹೊಂದಿರುವ ಬ್ಯಾಂಕ್ ಅಥವಾ ಪೋಸ್ಟಲ್ ಬ್ಯಾಂಕ್ ಖಾತೆಗಳಿಗೆ ಆಧಾರ್ ಸೀಡಿಂಗ್ ಮಾಡಿಸಿ, ಅಪ್‍ಡೇಟ್ ಮಾಡಿಸಿರುವ ಬಗ್ಗೆ ವರದಿಯನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಕುಮಾರ್ ಬಡಾವಣೆ ಕೊನೆ ಹಂತ, ಬಿ.ಸಿ.ಎಂ. ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ಸೂಚಿಸಿದೆ.

ನಿಗಧಿತ ಅವಧಿಯೊಳಗೆ ಸಂಬಂಧಪಟ್ಟ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮೂಲಕ NPCI ಮಾಡಿಸಿದಿದ್ದರೆ, ಯಾವುದೇ ಕಾರಣಗಳನ್ನು ಪರಿಗಣಿಸಿದೆ, ಮಂಜೂರಾದ ಮೊತ್ತವನ್ನು ಸರ್ಕಾರದ ಲೆಕ್ಕ ಶೀರ್ಷಿಕೆಗೆ ವಾಪಸ್ಸು ಪಡೆದು ಜಮೆ ಮಾಡಿಕೊಳ್ಳಲಾಗುವುದು ಎಂದು ತಿಳಿಯುವುದು. ಹೆಚ್ಚಿನ ವಿವರಗಳಿಗಾಗಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.