ಅನ್ನದಾತರಿಗೆ ಗುಡ್ ನ್ಯೂಸ್ : ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಫೆ.07: ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣಾ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಗಳು ಹಾಗೂ ಕೃಷಿ ಸಂಸ್ಕರಣ…

gricultural machinery vijayaprabha news 1

ದಾವಣಗೆರೆ, ಫೆ.07: ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣಾ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಗಳು ಹಾಗೂ ಕೃಷಿ ಸಂಸ್ಕರಣ ಘಟಕಗಳಾದ ರಾಗಿ ಕ್ಲೀನಿಂಗ್ ಮಷಿನ್, ಹಿಟ್ಟಿನ ಗಿರಣಿ, ಖಾರದಪುಡಿ ಮಷಿನ್ ಮತ್ತು ತಾಡಪಾಲುಗಳು ಸಹಾಯಧನದಲ್ಲಿ ಲಭ್ಯವಿದ್ದು, ರೈತರು ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಆಸಕ್ತ ಅರ್ಹರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ, ಟ್ರಾಕ್ಟರ್ ಆರ್.ಸಿ. ಪುಸ್ತಕ (ಟ್ರಾಕ್ಟರ್ ಚಾಲಿತ ಯಂತ್ರೋಪಕರಣಗಳಿಗೆ ಮಾತ್ರ), ಪಾಸ್‍ಪೋರ್ಟ್ ಸೈಜಿನ ಪೋಟೊಗಳೊಂದಿಗೆ ಆಯಾ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಮೇಲೆ ತಿಳಿಸಿದ ಉಪಕರಣಗಳನ್ನು ಪಡೆದಂತಹ ರೈತರು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ದಾವಣಗೆರೆ ಹಾಗೂ ಆಯಾ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.