ದಾವಣಗೆರೆ ಫೆ. 17: 2020-21ನೇ ಸಾಲಿನ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಪರಿಶಿಷ್ಟ ಪಂಗಡದವರ ಅಭಿವೃದ್ದಿಗಾಗಿ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು ಇ-ಕಾರ್ಟ್(ಹಣ್ಣು & ತರಕಾರಿಗಳನ್ನು ಮಾರುವ ಎಲೆಕ್ಟ್ರಿಕ್ ವಾಹನ) ಮತ್ತು ಕುರಿ/ಮೇಕೆ ಘಟಕ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಫಲಾನುಭವಿಗಳು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದಾವಣಗೆರೆ, ಚನ್ನಗಿರಿ ಮತ್ತು ಜಗಳೂರು ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕು ಕಚೇರಿಗಳಲ್ಲಿ ಅರ್ಜಿಗಳನ್ನು ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ 06 ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ/ಸಹಾಯಕ ನಿರ್ದೇಶಕರು(ಗ್ರೇಡ್-2)ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ: 08192-263546, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದಾವಣಗೆರೆ. ದೂ.ಸಂ: 08192-262002, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಚನ್ನಗಿರಿ ದೂ.ಸಂ: 08189-229844, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಜಗಳೂರು ದೂ.ಸಂ: 08196-227029, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹೊನ್ನಾಳಿ ದೂ.ಸಂ: 08188-252125, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹರಿಹರ. ದೂ.ಸಂ: 08192-247258 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.