ದಾವಣಗೆರೆ ಫೆ.14: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಸಂಯುಕ್ತ ಉನ್ನತ ಮಾಧ್ಯಮಿಕ (ಪದವಿ ಪೂರ್ವ 10+2) ಮಟ್ಟದ ವಿವಿಧ ವರ್ಗಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಪಿ.ಯು.ಸಿ ತೇರ್ಗಡೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ವೆಬ್‍ಸೈಟ್ ವಿಳಾಸ https://ssc.nic.in ಅಥವಾ www.ssckkr.kar.nic.in ಭೇಟಿ ನೀಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 07 ಕೊನೆಯ ದಿನವಾಗಿರುತ್ತದೆ. ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಟ 27 ವರ್ಷ, ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080 2527342, 25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ, ದೂರವಾಣಿ ಸಂಖ್ಯೆ 08192 259446 ಸಂಪರ್ಕಿಸಬಹುದು ಎಂದು ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ.ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.