ಅಮರಾವತಿ: ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರ ಪ್ರದೇಶ ಸರ್ಕಾರವು ತನ್ನ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಗಳಿಂದ 62 ವರ್ಷಗಳಿಗೆ ಹೆಚ್ಚಳ ಮಾಡಿ ಆದೇಶಿಸಿದ್ದು, ಈ ಸುಗ್ರೀವಾಜ್ಞೆ ಹೊರಡಿಸಿದ್ದು, ಈ ಹೊಸ ನಿಯಮ 2022 ರ ಜನವರಿ 1 ರಿಂದಲೇ ಅನ್ವಯವಾಗಲಿದೆ ಎಂದು ಜಗನ್ ಸರ್ಕಾರ ಅದೇಶಿಸಿದೆ.
ಇನ್ನು, ಜೂನ್ 2014 ರಲ್ಲಿ ಆಗಿನ ಆಂದ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರವು ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಏರಿಸಿದ್ದರು. ಸದ್ಯ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಮತ್ತೆ 2 ವರ್ಷ ಹೆಚ್ಚಿಸಿ ಜಗನ್ ಸರ್ಕಾರ ಆದೇಶ ಹೊರಡಿಸಿದೆ.
ಇನ್ನು, ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸದ ಸರ್ಕಾರಿ ನೌಕರರು ಸೇರಿದಂತೆ ಹಲವರಿಗೆ ಸಿಎಂ ಜಗನ್ ಸರ್ಕಾರದ ಈ ಕ್ರಮ ಅಚ್ಚರಿ ಮೂಡಿಸಿದೆ ಎನ್ನಲಾಗಿದೆ.