ಇಂದು ವಿಧಾನಸೌಧದ ಬಾಂಕ್ವೆಟ್ ಹಾಲ್​ನಲ್ಲಿ ‘ಜನೋತ್ಸವ’ ಕಾರ್ಯಕ್ರಮ: ರಾಜ್ಯದ ಜನತೆಗೆ ಸಿಎಂ ಉಡುಗೊರೆ!

ಬೆಂಗಳೂರು: ವಿಧಾನಸೌಧದ ಬಾಂಕ್ವೆಟ್ ಹಾಲ್​ನಲ್ಲಿ ಇಂದು ‘ಜನೋತ್ಸವ’ ಹೆಸರಿನ ಸರ್ಕಾರದ ಸಾಧನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರು 4 ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಲಿದ್ದಾರೆ. ಹೌದು, ‘ಜನೋತ್ಸವ’ ಸಮಾರಂಭವು ಬೆಳಗ್ಗೆ 10…

karnataka vijayaprabha

ಬೆಂಗಳೂರು: ವಿಧಾನಸೌಧದ ಬಾಂಕ್ವೆಟ್ ಹಾಲ್​ನಲ್ಲಿ ಇಂದು ‘ಜನೋತ್ಸವ’ ಹೆಸರಿನ ಸರ್ಕಾರದ ಸಾಧನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರು 4 ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಲಿದ್ದಾರೆ.

ಹೌದು, ‘ಜನೋತ್ಸವ’ ಸಮಾರಂಭವು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ತಪ್ಪದೆ ಹಾಜರಿರಬೇಕು ಎಂದು ಈಗಾಗಲೇ ಎಲ್ಲಾ ಸಚಿವರಿಗೂ ಸೂಚಿಸಲಾಗಿದ್ದು, ಈಗಾಗಲೇ ಎಲ್ಲರೂ ಬೆಂಗಳೂರಲ್ಲೆ ಇದ್ದಾರೆ.

ಇನ್ನು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಹಿನ್ನೆಲೆ ಈ ‘ಜನೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ.

Vijayaprabha Mobile App free

ರಾಜ್ಯದ ಜನತೆಗೆ ಸಿಎಂ ಉಡುಗೊರೆ:

ಇನ್ನು, ಇಂದು ಬಿಜೆಪಿ ಸರ್ಕಾರಕ್ಕೆ 3 ವರ್ಷ ಮತ್ತು ಸಿಎಂ ಬೊಮ್ಮಾಯಿ ಆಡಳಿತಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಉಡುಗೊರೆ ರೂಪದಲ್ಲಿ ಹೊಸ ಯೋಜನೆಗಳ ಘೋಷಣೆಯಾಗಲಿದೆ.

ಹೌದು, ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಮಿನಿ ಬಜೆಟ್‌ ಮಾದರಿಯಲ್ಲಿ ಹಲವಾರು ಜನಪ್ರಿಯ ಯೋಜನೆಗಳನ್ನು ಘೋಷಿಸಲಿದ್ದು, ಶಿಕ್ಷಣ, ಆರೋಗ್ಯ, ಕಂದಾಯ, ಜಲಸಂಪನ್ಮೂಲ, ಸಾಮಾಜಿಕ ಕಲ್ಯಾಣ ಇಲಾಖೆಗಳಿಗೆ ಸಂಬಂಧಿಸಿದಂತೆ ಹೊಸ ಯೋಜನೆಗಳನ್ನು ಘೋಷಿಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.