ಲಖನೌ: ಉತ್ತರ ಪ್ರದೇಶ ವಿಧಾನಸಭಾ ಸಚಿವಾಲಯದಲ್ಲಿ ನೌಕರರು ಮತ್ತು ಅಧಿಕಾರಿಗಳಿಗೆ ಜೀನ್ಸ್ ಮತ್ತು ಟೀ ಶರ್ಟ್ ಧರಿಸುವುದನ್ನು ನಿಷೇಧಿಸಿ ವಿಧಾನಸಭೆ ಆಡಳಿತದ ಜಂಟಿ ಕಾರ್ಯದರ್ಶಿ ನರೇಂದ್ರ ಕುಮಾರ್ ಮಿಶ್ರಾ ಆದೇಶ ಹೊರಡಿಸಿದ್ದಾರೆ.
ಹೌದು, ಘನತೆಗೆ ತಕ್ಕಂತಹ ಬಟ್ಟೆ ಧರಿಸಬೇಕು ಎಂದು ಸಲಹೆ ನೀಡಿರುವ ಸಚಿವಾಲಯ, ಒಂದು ವೇಳೆ ಟಿ-ಶರ್ಟ್ ಹಾಗೂ ಜೀನ್ಸ್ ತೊಟ್ಟು ವಿಧಾನಸಭೆಗೆ ಆಗಮಿಸಿದರೆ ಅಂತಹ ನೌಕರರಿಗೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ.
ಇನ್ನು, ಶಿಸ್ತು ಮತ್ತು ಘನತೆ ಕಾಪಾಡಲು ಈ ನಿಯಮ ಜಾರಿ ಮಾಡಿರುವುದಾಗಿ ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.