ಬಳ್ಳಾರಿ,ಮಾ.01: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಶ್ರೀ ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ.3ರಂದು ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ನಿರುದ್ಯೋಗ ಯುವಕ ಯುವತಿಯರು ಭಾಗವಹಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಸ್ಸೆಸ್ಸೆಲ್ಸಿಗಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯಿಸಿ, ಐಟಿಐ, ಡಿಪ್ಲೋಮ, ಬಿ.ಇ, ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಕೋವಿಡ್ 19 ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು, ಎಲ್ಲರು ತಪ್ಪದೆ ಮಾಸ್ಕ್ ಮತ್ತು ಸ್ಯಾನಿಟೇಸರ್ ಬಳಸುವ ಮೂಲಕ ಸಾಮಾಜಿಕ ಅಂತರವನ್ನು ಪಾಲಿಸಿ ಮೇಳದಲ್ಲಿ ಭಾಗವಹಿಸಿ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ: ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ದೂ.ಸಂ.;08392-273988,9844444958 ಗೆ ಸಂಪರ್ಕಿಸಬಹುದು.