ಅನುದಾನ ವಿಚಾರಕ್ಕೆ ‘ಕಲ್ಯಾಣ ಕರ್ನಾಟಕ’ ಶಾಸಕರ ಆಕ್ಷೇಪ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬೆಂಗಳೂರಿನ ರೆಸಾರ್ಟ್ ನಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಅನುದಾನ ವಿಚಾರ ಸಂಬಂಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೌದು, ಕಲ್ಯಾಣ ಕರ್ನಾಟಕ ಕ್ಷೇತ್ರಗಳಿಗೆ ಈವರೆಗೆ ಅನುದಾನ…

karunakar reddy mla

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬೆಂಗಳೂರಿನ ರೆಸಾರ್ಟ್ ನಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಅನುದಾನ ವಿಚಾರ ಸಂಬಂಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೌದು, ಕಲ್ಯಾಣ ಕರ್ನಾಟಕ ಕ್ಷೇತ್ರಗಳಿಗೆ ಈವರೆಗೆ ಅನುದಾನ ಬಿಡುಗಡೆ ಆಗಿಲ್ಲ. ಬಿಡುಗಡೆಯಾದರೂ ಇರುವ 2 ವರ್ಷದಲ್ಲಿ ಕಾಮಗಾರಿಗಳನ್ನು ಮುಗಿಸಲು ಆಗಲ್ಲ. ಯಾವ ಮುಖ ಇಟ್ಟುಕೊಂಡು ಮುಂದಿನ ಚುನಾವಣೆಗೆ ಹೋಗುವುದು ಎಂದು ಹರಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ ಅವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು ಎನ್ನಲಾಗಿದೆ.

ಈ ಹಿಂದೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸರ್ಕಾರ ಘೋಷಿಸಿರುವ ರೂ.1,500 ಕೋಟಿ ಅನುದಾನ ಈ ವರೆಗೆ ಖರ್ಚಾಗಿಲ್ಲ, ಇದಕ್ಕೆ ಸಂಬಂಧಿಸಿದ ಕ್ರಿಯಾಯೋಜನೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಎಂದು ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದರು.

Vijayaprabha Mobile App free

ಇದನ್ನು ಓದಿ: ಸರ್ಕಾರದಿಂದ 9 ತಿಂಗಳ ಹಿಂದೆಯೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ 1,500 ಕೋಟಿ ಘೋಷಣೆ; ಇಲ್ಲಿಯವರೆಗೂ ಖರ್ಚು ಮಾಡದ ಸರ್ಕಾರ; ಸಿದ್ದರಾಮಯ್ಯ ಅವರಿಂದ ಒತ್ತಾಯ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.