ಚೆನ್ನೈ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡುವ ಮುನ್ನ ಮಕ್ಕಳ್ ನೀದಿ ಮಾಯಂ (ಎಂಎನ್ಎಂ) ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು 1000 ಕೋಟಿ ವೆಚ್ಚದ ನೂತನ ಸಂಸತ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶ ಕಠಿಣ ಸವಾಲುಗಳನ್ನು ಎದುರಿಸುತ್ತಿರುವಾಗ ಹೊಸ ಸಂಸತ್ ಕಟ್ಟಡದ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ. ಕೊರೋನಾದಿಂದಾಗಿ ದೇಶದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ ₹1000 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡದ ಅಗತ್ಯವಿದೆಯೇ ಎಂದು (ಎಂಎನ್ಎಂ) ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



