ದಾವಣಗೆರೆ: ಸಿಎಂಗೆ ಎಚ್ಚರಿಕೆ ಕೊಟ್ಟ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀ!

ದಾವಣಗೆರೆ: ರಾಜ್ಯದಲ್ಲಿ ಪಠ್ಯಕ್ರಮ ಪರಿಷ್ಕರಣೆ ವಿಚಾರ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದ್ದು, ಈಗ ಆಗಿರುವ ಲೋಪದೋಷ ಸರಿಪಡಿಸಿ, ಇಲ್ಲದಿದ್ದರೆ ಇದೇ ರೀತಿಯ ಉದ್ಧಟತನ ಹಾಗೂ ಕಾರ್ಯವೈಖರಿ ಮುಂದುವರಿದರೆ ಮುಂಬರುವ ದಿನಗಳಲ್ಲಿ ಬಹಳ ಕಷ್ಟ ಅನುಭವಿಸಬೇಕಾಗುತ್ತದೆ ಎಂದು…

Niranjananandapuri Swamiji vijayaprabha

ದಾವಣಗೆರೆ: ರಾಜ್ಯದಲ್ಲಿ ಪಠ್ಯಕ್ರಮ ಪರಿಷ್ಕರಣೆ ವಿಚಾರ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದ್ದು, ಈಗ ಆಗಿರುವ ಲೋಪದೋಷ ಸರಿಪಡಿಸಿ, ಇಲ್ಲದಿದ್ದರೆ ಇದೇ ರೀತಿಯ ಉದ್ಧಟತನ ಹಾಗೂ ಕಾರ್ಯವೈಖರಿ ಮುಂದುವರಿದರೆ ಮುಂಬರುವ ದಿನಗಳಲ್ಲಿ ಬಹಳ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ಕಾಗಿನೆಲೆ ಮಠದ ಪೀಠಾಧಿಪತಿ ನಿರಂಜನಾನಂದಪುರಿ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಹೌದು, ಹರಿಹರದ ತಾಲೂಕಿನ ಬೆಳ್ಳೂಡಿಯ ಕನಕ ಪೀಠದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕಾಗಿನೆಲೆ ಮಠದ ಪೀಠಾಧಿಪತಿ ನಿರಂಜನಾನಂದಪುರಿ ಮಹಾಸ್ವಾಮೀಜಿ ಅವರು, ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವರು ಉದ್ಧಟತನ ಬಿಟ್ಟು ಗೊಂದಲ ಪರಿಹರಿಸಬೇಕಾಗಿದ್ದು, ಆಗಿರುವ ಪ್ರಮಾದ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಯಾವುದೇ ಒಂದು ಜಾತಿಗೆ ಶಿಕ್ಷಣ ಸೀಮಿತ ಮಾಡಬಾರದು. ಕುವೆಂಪು, ಜಗಜ್ಯೋತಿ ಬಸವಣ್ಣ, ಕನಕದಾಸರು ಸೇರಿದಂತೆ ಮಹಾನ್ ಮಾನವತವಾದಿಗಳ ಸತ್ಯವಾದ ಜೀವನ ಚರಿತ್ರೆಯನ್ನು ಸಮುದಾಯಕ್ಕೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸವನ್ನು ಸರ್ಕಾರ ಮಾಡಬೇಕಾಗಿದ್ದು, ಪಠ್ಯದಲ್ಲಿ ಕೆಲವೊಂದು ಅಂಶಗಳನ್ನು ಮುಚ್ಚಿಟ್ಟು ಇಲ್ಲಸಲ್ಲದ ಅಂಶಗಳನ್ನು ಸೇರಿಸಲು ಮುಂದಾದರೆ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Vijayaprabha Mobile App free

ಇಂತಹ ಕೆಲಸ ಅಕ್ಷಮ್ಯ ಅಪರಾಧವಾಗಿದ್ದು, ಲೋಪದೋಷಗಳನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳುತ್ತೀರಾ ಎಂಬ ವಿಶ್ವಾಸವಿದ್ದು, ಇಲ್ಲದಿದ್ದರೆ ನಾವು ಎಲ್ಲರ ಜೊತೆಗೂಡಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.