ರಾಜ್ಯದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ‘ಕನ್ನಡ’ ಲೇಬಲ್ ಕಡ್ಡಾಯ: ಸರ್ಕಾರದ ಆದೇಶ

ಬೆಂಗಳೂರು: ಕನ್ನಡದಲ್ಲಿ ತಯಾರಾಗುವ ಉತ್ಪನ್ನಗಳ ಹೆಸರು, ಲೇಬಲ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿಯೇ ಇರಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ಉಮಾದೇವಿ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯದೊಳಗೆ…

ಬೆಂಗಳೂರು: ಕನ್ನಡದಲ್ಲಿ ತಯಾರಾಗುವ ಉತ್ಪನ್ನಗಳ ಹೆಸರು, ಲೇಬಲ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿಯೇ ಇರಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ಉಮಾದೇವಿ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯದೊಳಗೆ ತಯಾರಿಸಿ ಮಾರಾಟ ಮಾಡುವ ಎಲ್ಲಾ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರುಗಳು ಮತ್ತು ಅವುಗಳ ಬಳಕೆಗೆ ಸಂಬಂಧಿಸಿದ ನಿರ್ದೇಶನಗಳು ಯಾವುದಾದರೂ ಇದ್ದರೆ, ಇತರ ಯಾವುದೇ ಭಾಷೆಯ ಜೊತೆಗೆ ಕನ್ನಡದಲ್ಲಿರಬೇಕು ಎಂದು ಹೇಳಿದ್ದಾರೆ.

ಕನ್ನಡ ಭಾಷಾ ಸಮಗ್ರ ಕಾಯ್ದೆ 2022ರ ಅಡಿಯಲ್ಲಿ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ.  ಆ ಭಾಷೆಯು ಬೆಳೆಯಬೇಕಾದರೆ, ಆ ಭೂಮಿಯಲ್ಲಿ ಉತ್ಪಾದನೆ, ಮಾರುಕಟ್ಟೆ ಮತ್ತು ವ್ಯಾಪಾರ ಸ್ಥಳೀಯ ಭಾಷೆಯಲ್ಲಿರಬೇಕು. ಆದ್ದರಿಂದ, ರಾಜ್ಯದಲ್ಲಿ ತಯಾರಾಗುವ ಸರ್ಕಾರಿ ಮತ್ತು ಖಾಸಗಿ ಉತ್ಪನ್ನಗಳಿಗೆ ಕನ್ನಡವನ್ನು ಕಡ್ಡಾಯಗೊಳಿಸಬೇಕು. ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಮತ್ತು ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.