karnataka budget 2024: ಬಜೆಟ್ ಮಂಡನೆಯ ಆರಂಭದಲ್ಲೇ ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ, ವಾಹನ ಮಾಲೀಕರಿಗೆ ಶಾಕ್ ಕೊಟ್ಟಿದೆ.
ಇದನ್ನು ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ದೇವದಾಸಿಯರ ಮಾಸಾಶನ ಹೆಚ್ಚಳ, ಶೇ.6ರ ಬಡ್ಡಿ ಸಹಾಯಧನ
ಬಜೆಟ್ ಮಂಡನೆಯ ಆರಂಭದಲ್ಲೇ ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಮತ್ತೊಮ್ಮೆ ಬಿಯರ್ ದರ ಹೆಚ್ಚಿಸಲು ನಿರ್ಧರಿಸಿದೆ. ಬಿಯರ್ ಜೊತೆಗೆ ಎಲ್ಲಾ ಬ್ರ್ಯಾಂಡ್‌ಗಳ ಬೆಲೆ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ನೆರೆಯ ರಾಜ್ಯಗಳ ಮದ್ಯ ದರಗಳಿಗೆ ಅನುಗುಣವಾಗಿ ಪರಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ.
2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿ: ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್!
karnataka budget 2024: ವಾಹನ ಮಾಲೀಕರಿಗೆ ಶಾಕ್; ತೆರಿಗೆ ಹೆಚ್ಚಳದ ಘೋಷಣೆ
ವಾಹನ ಮಾಲೀಕರಿಗೆ ಸಿದ್ದರಾಮಯ್ಯ ಶಾಕ್ ಕೊಟ್ಟಿದ್ದಾರೆ. ಮೋಟಾರು ವಾಹನಗಳ ತೆರಿಗೆಯನ್ನು ಶೇ.7ರಷ್ಟು ಏರಿಕೆ ಮಾಡಲಾಗಿದೆ. ಬಜೆಟ್‌ನಲ್ಲಿ ರಾಜ್ಯದ ಜನರಿಗೆ ತೆರಿಗೆ ಹೆಚ್ಚಳದ ಬಿಸಿ ತಟ್ಟಿದೆ. ಹಲವು ತೆರಿಗೆಗಳನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದೆ.
- ಮೋಟಾರು ವಾಹನ ತೆರಿಗೆ 7% ಹೆಚ್ಚಳ
- ಅಬಕಾರಿ ಸುಂಕ ಶೇ. 20 ರಷ್ಟು ಏರಿಕೆ
- ನೋಂದಣಿ ಮುದ್ರಾಂಕ ಶುಲ್ಕ ಶೇ. 14 ರಷ್ಟು ಹೆಚ್ಚಳ
- ಇತರ ತೆರಿಗೆಗಳು 1% ಏರಿಕೆ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |