ಬೆಂಗಳೂರು: ಮರಾಠ ಪ್ರಾಧಿಕಾರ ಸ್ಥಾಪನೆಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಕನ್ನಡ ಪರ ಹೋರಾಟಗಾರು,ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಮರಾಠ ಪ್ರಾಧಿಕಾರ ಸ್ಥಾಪನೆಗೆ ವಿರೋಧ ವ್ಯಕ್ತಪಡಿದ್ದವು.
ಇನ್ನು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸಿಎಂ ಯಡಿಯೂರಪ್ಪ ಅವರು ಈ ಕೂಡಲೇ ರಾಜೀನಾಮೆ ನೀಡಬೇಕು, ಇದರ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಕೈವಾಡವಿದೆ ಎಂದು ಆರೋಪ ಮಾಡಿದ್ದು, ರಾಜ್ಯದಲ್ಲಿ ಮರಾಠ ಪ್ರಾಧಿಕಾರ ಸ್ಥಾಪನೆ ರಾಜ್ಯದಾತ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
ಈ ಹಿನ್ನಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುವ ಹಿನ್ನೆಲೆ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಾಪಸ್‌ಗೆ ರಾಜ್ಯ ಸರ್ಕಾರಕ್ಕೆ ನ.27ರಂದು ಗಡುವು ನೀಡಿವೆ. ನ. 27ರೊಳಗೆ ಹಿಂಪಡೆಯದಿದ್ದರೆ ಕರ್ನಾಟಕ ಬಂದ್ ಮಾಡಲು ಚಿಂತನೆ ನಡೆಸಲಾಗುತ್ತಿದೆ.
ಇದನ್ನು ಓದಿ: ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆಗೆ ಮೋದಿ ಕೈವಾಡವಿದೆ: ವಾಟಾಳ್ ನಾಗರಾಜ್ ಕಿಡಿ