ಜಿಡಿಪಿಯಲ್ಲಿ ದೇಶದಲ್ಲೇ ಕರ್ನಾಟಕ ಫಸ್ಟ್; ಸಿಎಂ ಸಿದ್ದರಾಮಯ್ಯ ಹೇಳಿಕೆ

ತುಮಕೂರು: ಕಾಂಗ್ರೆಸ್ ಘೋಷಿಸಿದ ಪಂಚ ಗ್ಯಾರೆಂಟಿಗಳಿಂದ ರಾಜ್ಯದ ಜಿಡಿಪಿ (GDP) ಹೆಚ್ಚಿದೆಯಂತೆ! ತುಮಕೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ  (Siddaramaiah) ಅವರೇ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವಾಗ ದೇಶದಲ್ಲೇ ಕರ್ನಾಟಕದ…

Karnataka first in the country in terms of GDP, CM Siddaramaiah

ತುಮಕೂರು: ಕಾಂಗ್ರೆಸ್ ಘೋಷಿಸಿದ ಪಂಚ ಗ್ಯಾರೆಂಟಿಗಳಿಂದ ರಾಜ್ಯದ ಜಿಡಿಪಿ (GDP) ಹೆಚ್ಚಿದೆಯಂತೆ!

ತುಮಕೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ  (Siddaramaiah) ಅವರೇ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವಾಗ ದೇಶದಲ್ಲೇ ಕರ್ನಾಟಕದ ಜಿಡಿಪಿ ನಂಬರ್ 1 ಆಗಿದೆ ಎಂದಿದ್ದಾರೆ ಸಿಎಂ.

Karnataka first in the country in terms of GDP, CM Siddaramaiah

Vijayaprabha Mobile App free

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಆಡಳಿತದಲ್ಲಿ ದೇಶದ GDP ಇನ್ನೂ 8 ಇದೆ. ಆದರೆ ಕಾಂಗ್ರೆಸ್ ಆಡಳಿತದ ನಮ್ಮ ರಾಜ್ಯದ GDP 10ಕ್ಕೆ ತಲುಪಿದೆ ಎಂದು ಸಿಎಂ ಸಮರ್ಥಿಸಿಕೊಂಡಿದ್ದಾರೆ.

ತೆರಿಗೆ ಪಾವತಿಯಲ್ಲಿ ಕರ್ನಾಟಕ ಸೆಕೆಂಡ್

ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ನಮ್ಮ ಸರ್ವ ಧರ್ಮೀಯರ ಅಭಿವೃದ್ಧಿ ಕಾರ್ಯಗಳಿಂದ ಸಾಧ್ಯವಾಗಿದೆ ಎಂದಿದ್ದಾರೆ.

ನಮ್ಮ ಪಂಚ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಪ್ರತಿಪಾದಿಸಿದ್ದಾರೆ ಸಿಎಂ.

ರಾಜ್ಯಗಳು ಅಭಿವೃದ್ಧಿ ಕಂಡರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ, ಜತೆಗೆ ದೇಶದ GDP ಸಹ ಪ್ರಗತಿ ಕಾಣಲು ಸಾಧ್ಯ ಎಂದ ಸಿಎಂ, ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ ಎಂದು ಪರೋಕ್ಷವಾಗಿ ಕೇಂದ್ರಕ್ಕೆ ಚಾಟಿ ಬೀಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಇದರ ಜತೆ ಜತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ ಇಂದು ಬೆಳಗ್ಗೆ ಸರ್ಕಾರದ ವಿವಿಧ ಯೋಜನೆಗಳಡಿ 23 ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ 750 ಕೋಟಿ ರೂಪಾಯಿ ಮೊತ್ತದ ವಿವಿಧ ಸೌಲಭ್ಯ ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ಸಹ ನೆರವೇರಿಸಿದ್ದಾರೆ ಸಿಎಂ.

ಈ ವೇಳೆ ತಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿದ ಸಿಎಂ, ತುಮಕೂರು ಜಿಲ್ಲೆಯಲ್ಲಿ 1.5 ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತಿ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ ಎಂದಿದ್ದಾರೆ.

ಸರ್ವರ ಪರ ನಮ್ಮ ಸರ್ಕಾರ

ನಮ್ಮ ಸರ್ಕಾರ ಮಹಿಳೆಯರ ಪರ, ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ. ಹೀಗಾಗಿ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮ ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸಿದೆ ಎಂದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.