Gruha Arogya Yojana | ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಈ ಯೋಜನೆಯ ಉದ್ದೇಶ, ಪ್ರಯೋಜನಗಳು

Gruha Arogya Yojana : ಮನೆ ಬಾಗಿಲಿನಲ್ಲಿಯೇ ಆರೋಗ್ಯ ಸೇವೆ ಒದಗಿಸುವ ವಿನೂತನ ಗೃಹ ಆರೋಗ್ಯ ಯೋಜನೆಯನ್ನು ಕರ್ನಾಟಕ ಸರ್ಕಾರವು ಅಕ್ಟೋಬರ್ 24 ರಂದು ಜಾರಿಗೊಳಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜನರು ರಕ್ತದೊತ್ತಡ, ಸಕ್ಕರೆ…

Karnataka Gruha Arogya Yojana

Gruha Arogya Yojana : ಮನೆ ಬಾಗಿಲಿನಲ್ಲಿಯೇ ಆರೋಗ್ಯ ಸೇವೆ ಒದಗಿಸುವ ವಿನೂತನ ಗೃಹ ಆರೋಗ್ಯ ಯೋಜನೆಯನ್ನು ಕರ್ನಾಟಕ ಸರ್ಕಾರವು ಅಕ್ಟೋಬರ್ 24 ರಂದು ಜಾರಿಗೊಳಿಸಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜನರು ರಕ್ತದೊತ್ತಡ, ಸಕ್ಕರೆ ಕಾಯಿಲೆ ಇದ್ದರೂ ತಪಾಸಣೆ, ಚಿಕಿತ್ಸೆ ಪಡೆದುಕೊಳ್ಳುತ್ತಿಲ್ಲ. ಇದಕ್ಕಾಗಿ ರಾಜ್ಯ ಆರೋಗ್ಯ ಇಲಾಖೆಯು ಗ್ರಾಮೀಣ ಜನರ ಆರೋಗ್ಯ ಸುಧಾರಿಸುವ ಹಾಗು ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿರುವ ಕರ್ನಾಟಕ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಿದೆ.

ಇದನ್ನೂ ಓದಿ: UPI Payment | ತಪ್ಪಾಗಿ ತಪ್ಪು ಸಂಖ್ಯೆಗೆ UPI ಪಾವತಿ ಮಾಡಿರುವಿರಾ? ನೋ ಟೆನ್ಶನ್.. 48 ಗಂಟೆಯಲ್ಲಿ ಹೀಗೆ ರಿಟರ್ನ್!

Vijayaprabha Mobile App free

Gruha Arogya Yojana : ಗೃಹ ಆರೋಗ್ಯ ಯೋಜನೆಯಿಂದ ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ

ರೋಗ ಬಂದ ಮೇಲೆ ಚಿಕಿತ್ಸೆ ಮಾಡುವುದಕ್ಕಿಂತ, ಅದು ಬರುವ ಮುನ್ನವೇ ತಪಾಸಣೆ ಮಾಡಿಸಿಕೊಳ್ಳುವುದು ಮುಖ್ಯವಾಗಿದ್ದು, ಹೀಗೆ ಮಾಡುವುದರಿಂದ ರೋಗವನ್ನು ಮೊದಲೇ ಗುರುತಿಸಿ ಚಿಕಿತ್ಸೆ ನೀಡಬಹುದು.

ವೈದ್ಯರನ್ನು, ಆರೋಗ್ಯ ಸಿಬ್ಬಂದಿಗಳನ್ನು ಪ್ರತಿಯೊಬ್ಬರ ಮನೆ ಬಾಗಿಲಿಗೆ ಕಳುಹಿಸಿ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧಿ ಒದಗಿಸುವುದುಈ  ಯೋಜನೆಯ ಮೂಲ ಪರಿಕಲ್ಪನೆಯಾಗಿದೆ. ಜನರು ಆರ್ಥಿಕ ಹೊರೆಯಾಗುತ್ತದೆ ಎಂದು ಆರೋಗ್ಯವನ್ನು ನಿರ್ಲಕ್ಷಿಸುವುದು ಬೇಡ ಎಂಬ ಕಾರಣಕ್ಕೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Online transaction | ಆನ್‌ಲೈನ್ ವಹಿವಾಟು ಎಂದರೇನು? ಆನ್​ಲೈನ್ ಶಾಪಿಂಗ್ ವೇಳೆ ವಂಚನೆಗಳಿಂದ ಪಾರಾಗಲು ಹೀಗೆ ಮಾಡಿ!

Gruha Arogya Yojana ಉದ್ದೇಶ

  • ರಕ್ತದೊತ್ತಡ, ಮಧುಮೇಹ, ವಿವಿಧ ರೀತಿಯ ಕ್ಯಾನ್ಸರ್ ತಡೆಗಟ್ಟುವುದು.
  • ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಗಳನ್ನು ಹತ್ತಿರಕ್ಕೆ ತರುವುದು.
  • ಜನರಿಗೆ ತಮ್ಮ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು.
  • ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡುವುದು.

Gruha Arogya Yojana ಕಾರ್ಯಗಳು

  • ಆರೋಗ್ಯ ಸಿಬ್ಬಂದಿಗಳಿಂದ ಮನೆ ಮನೆಗೆ ಭೇಟಿ.
  • ಸಂಬಂಧಿಸಿದ ತಪಾಸಣೆಗಳನ್ನು ನಡೆಸಲಾಗುತ್ತದೆ.
  • 30 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆದ್ಯತೆ.
  • ವಾರದಲ್ಲಿ ನಾಲ್ಕು ದಿನ 15 ಮನೆಗಳಿಗೆ ಭೇಟಿ.
  • ರೋಗ ಪತ್ತೆಯಾದರೆ ಅಗತ್ಯ ಔಷಧಿ ಒದಗಿಸಲಾಗುತ್ತದೆ.
  • ಆರೋಗ್ಯಕರ ಜೀವನಶೈಲಿಯ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಇದನ್ನೂ ಓದಿ: PM Kisan | ರೈತರಿಗಾಗಿಯೇ ಕೇಂದ್ರದ ಈ ಸ್ಕೀಮ್; ಈ ಒಂದು ಕೆಲಸ ಮಾಡಿದರೆ ಖಾತೆಗೆ ಹಣ; ಸಂಪೂರ್ಣ ವಿವರಗಳು ಇಲ್ಲಿವೆ

Gruha Arogya Yojana ಯಾವೆಲ್ಲಾ ತಪಾಸಣೆ ಮಾಡಲಾಗುತ್ತದೆ?

ಗೃಹ ಆರೋಗ್ಯ ಯೋಜನೆಡಿಯಲ್ಲಿ ಬಾಯಿ, ಗರ್ಭ ಕಂಠ, ಸ್ತನ ಕ್ಯಾನ್ಸರ್ ಸ್ಕ್ರೀನಿಂಗ್‌, ರಕ್ತದೊತ್ತಡ, ಮಧುಮೇಹ, BMI, ವೇಸ್ಟ್‌ ಹಿಪ್‌ ರೇಷ್ಯೋ ಅನುಪಾತ, ಸ್ಲೀಪ್ ಅಪ್ನಿಯಾ, ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ತಪಾಸಣೆ ನಡೆಸಲಾಗುತ್ತದೆ. ಆರೈಕೆಯಲ್ಲಿರುವ ರೋಗಿಗಳಿಗೆ, ವಿಶೇಷ ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಅಸಾಂಕ್ರಾಮಿಕ ರೋಗಿಗಳು ಇದ್ದಲ್ಲಿ ಔಷಧೋಪಚಾರಗಳನ್ನು ನೀಡಲಾಗುವುದಲ್ಲದೆ, 4-6 ತಿಂಗಳುಗಳಲ್ಲಿ ಸ್ಕ್ರೀನಿಂಗ್ ಕಾರ್ಯ ಪೂರ್ಣಗೊಂಡು ಹೆಚ್ಚಿನ ಆರೈಕೆಗಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತದೆ.

ಇದನ್ನೂ ಓದಿ: ವೃತ್ತಿ ಪ್ರೋತ್ಸಾಹ ಸಾಲ ಯೋಜನೆ | ರೂ.1,00,000 ವರೆಗೆ ಉಚಿತ ಸಾಲ? ಉದ್ದೇಶ, ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ

Gruha Arogya Yojanaಯಿಂದ ಜನರಿಗೆ ಸಿಗುವ ಪ್ರಯೋಜನಗಳು

ಗೃಹ ಆರೋಗ್ಯ ಯೋಜನೆಯಿಂದ ಜನರು ತಮ್ಮ ಆರೋಗ್ಯದ ಬಗ್ಗೆ ಅರಿವು ಪಡೆಯಲು ಸಹಾಯವಾಗುತ್ತದೆ. ರೋಗಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡುವುದರಿಂದ ಜೀವ ಉಳಿಸಬಹುದು. ಈ ಯೋಜನೆಯು ಆರೋಗ್ಯ ಸೇವೆಗಳನ್ನು ಜನರಿಗೆ ಹತ್ತಿರ ತರುತ್ತದೆ. ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಬಿಪಿ, ಶುಗರ್ ಇದ್ದವರಿಗೆ ಮನೆಗೆ ಔಷಧಗಳನ್ನು ಉಚಿತವಾಗಿ ತಲುಪಿಸಲಾಗುತ್ತದೆ.
ಕೃಪೆ: News18 Kannada

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.