BIG NEWS: ರೈತರ ಆತ್ಮಹತ್ಯೆ; ಮಹಾರಾಷ್ಟ್ರ, ಕರ್ನಾಟಕದಲ್ಲೇ ಅತಿ ಹೆಚ್ಚು..!

ಕೋವಿಡ್‌ ಸಾಂಕ್ರಾಮಿಕದ ವೇಳೆ 2021ರಲ್ಲಿ ದೇಶದಲ್ಲಿ 10,881 ರೈತರು ಮತ್ತು ರೈತ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪಟ್ಟಿಯಲ್ಲಿ ಮಹಾರಾಷ್ಟ್ರ (ಶೇ 37.3%) ಮತ್ತು ಕರ್ನಾಟಕ (ಶೇ 19.9%) ಮೊದಲೆರಡು ಸ್ಥಾನಗಳಲ್ಲಿವೆ. ಹೌದು, ರೈತರ…

farmer suicides vijayaprabha news

ಕೋವಿಡ್‌ ಸಾಂಕ್ರಾಮಿಕದ ವೇಳೆ 2021ರಲ್ಲಿ ದೇಶದಲ್ಲಿ 10,881 ರೈತರು ಮತ್ತು ರೈತ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪಟ್ಟಿಯಲ್ಲಿ ಮಹಾರಾಷ್ಟ್ರ (ಶೇ 37.3%) ಮತ್ತು ಕರ್ನಾಟಕ (ಶೇ 19.9%) ಮೊದಲೆರಡು ಸ್ಥಾನಗಳಲ್ಲಿವೆ.

ಹೌದು, ರೈತರ ಆತ್ಮಹತ್ಯೆ ಪ್ರಕರಣಗಳ ವರದಿ ಬಿಡುಗಡೆ ಮಾಡಿರುವ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (NCRB) ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗಿದ್ದು, ನಂತರದ 3 ಸ್ಥಾನಗಳಲ್ಲಿ ಕ್ರಮವಾಗಿ ಆಂಧ್ರಪ್ರದೇಶ (ಶೇ 9.8), ಮಧ್ಯಪ್ರದೇಶ (ಶೇ 6.2) & ತಮಿಳುನಾಡು (ಶೇ 5.5) ರಾಜ್ಯಗಳಿವೆ.

ಇನ್ನು, 11 ರಾಜ್ಯಗಳಲ್ಲಿ ರೈತರ ಆತ್ಮಹತ್ಯೆ ನಡೆದಿಲ್ಲ. ದಿನಗೂಲಿಗಳು (37,751), ಸ್ವ ಉದ್ಯೋಗಿಗಳು (18,803), ನಿರುದ್ಯೋಗಿಗಳು (11,724) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (NCRB) ವರದಿ ಹೇಳಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.