ನಾಳೆ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳು ಡಿ.12ಕ್ಕೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನರಾದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹೀಗಾಗಿ ಸಾರ್ವತ್ರಿಕ ರಜೆ ಇರುವ ಕಾರಣ ನಾಳೆ ನಡೆಯಬೇಕಿದ್ದಂತ ಕೆಇಎ ನೇಮಕಾತಿ ಪರೀಕ್ಷೆಗಳನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಲಾಗಿದೆ.…

ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನರಾದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹೀಗಾಗಿ ಸಾರ್ವತ್ರಿಕ ರಜೆ ಇರುವ ಕಾರಣ ನಾಳೆ ನಡೆಯಬೇಕಿದ್ದಂತ ಕೆಇಎ ನೇಮಕಾತಿ ಪರೀಕ್ಷೆಗಳನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 10-12-2024ರಂದು ಮಾಜಿ ಸಿಎಂ ಮತ್ತು ಕೇಂದ್ರ ಸಚಿವರಾಗಿದ್ದಂತ ಎಸ್ ಎಂ ಕೃಷ್ಣ ಅವರು ನಿಧನರಾಗಿರುವ ಕಾರಣ ದಿನಾಂಕ 11-12-2024ರಂದು ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ.

ಆದುದ್ದರಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 11-12-2024ರಂದು ನಿಗದಿಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 12-12-2024ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.