ಮಹತ್ವದ ಘೋಷಣೆ: ಬಿಪಿಎಲ್​ ಕಾರ್ಡ್ ಹೊಂದಿರುವ 20 ಲಕ್ಷ ಕುಟುಂಬಗಳಿಗೆ ಉಚಿತ ಇಂಟರ್ನೆಟ್

ತಿರುವನಂತಪುರಂ: ಕೇರಳದ ರಾಜ್ಯ ಸರ್ಕಾರ ಸುಮಾರು 1500 ಕೋಟಿ ರೂಪಾಯಿ ವೆಚ್ಚದಲ್ಲಿ ಆಪ್ಟಿಕ್ ನೆಟ್ವರ್ಕ್ (KFON) 2021 ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್​ ಅವರು ಚಾಲನೆ ನೀಡಿದ್ದಾರೆ.…

ತಿರುವನಂತಪುರಂ: ಕೇರಳದ ರಾಜ್ಯ ಸರ್ಕಾರ ಸುಮಾರು 1500 ಕೋಟಿ ರೂಪಾಯಿ ವೆಚ್ಚದಲ್ಲಿ ಆಪ್ಟಿಕ್ ನೆಟ್ವರ್ಕ್ (KFON) 2021 ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್​ ಅವರು ಚಾಲನೆ ನೀಡಿದ್ದಾರೆ.

​ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್​ ಅವರು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಇನ್ಮುಂದೆ ಉಚಿತ ಇಂಟರ್ನೆಟ್ ದೊರೆಯಲಿದ್ದು, 20 ಲಕ್ಷ ಕುಟುಂಬಗಳಿಗೆ ಈ ಸೌಲಭ್ಯ ಸಿಗಲಿದೆ ಎಂದು ಹೇಳಿದ್ದಾರೆ.

ಇನ್ನು KFON ಯೋಜನೆಯು ಡಿಜಿಟಲ್ ಕ್ಷೇತ್ರದಲ್ಲಿ ಕ್ರಾಂತಿಯುಂಟು ಮಾಡಲಿದ್ದು, ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಎಲ್ಲಾ 14 ಜಿಲ್ಲೆಗಳ ಹಳ್ಳಿಗಳಿಗೂ ಹೈಸ್ಪೀಡ್ ಇಂಟರ್ನೆಟ್ ಸಂಪರ್ಕ ಸೌಲಭ್ಯವನ್ನು ಸಂಪೂರ್ಣ ವಾಗಿ ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.

Vijayaprabha Mobile App free

ಇದಕೊಸ್ಕರ ಒಟ್ಟು 35,000 ಕಿ.ಮೀ ಉದ್ದದ ಆಪ್ಟಿಕಲ್ ಫೈಬರ್ ನೆಟ್​ವರ್ಕ್ ಹಾಕಲಾಗುತ್ತಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ. ಈ ಯೋಜನೆಯಲ್ಲಿ ಇ-ಅರೋಗ್ಯ ಕಾರ್ಯಕ್ರಮದಂತಹ ಸೇವೆಗಳು ಸೌಲಭ್ಯ ಪಡೆಯಲಿದ್ದು, ಐಟಿ ಉದ್ಯಮಗಳು, ವಿಮಾನ ನಿಲ್ದಾಣಗಳು ಸೌಲಭ್ಯ ಪಡೆಯಲಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.