ಶಿಖರ್ ಧವನ್ ಶತಕ ವ್ಯರ್ಥ; ಡೆಲ್ಲಿ ವಿರುದ್ಧ ಪಂಜಾಬ್ ತಂಡಕ್ಕೆ 5 ವಿಕೆಟ್ ಗಳ ಭರ್ಜರಿ ಜಯ

ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 38ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳ…

ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 38ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 165 ರನ್‍ಗಳ ಗುರಿ ಬೆನ್ನಟ್ಟಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 19 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿ 5 ವಿಕೆಟ್ ಗಳ ಗೆಲುವು ಸಾಧಿಸಿತು. ಪಂಜಾಬ್ ಪರ ನಾಯಕ ರಾಹುಲ್(15), ಗೇಲ್(29), ಪೂರನ್(53), ಮ್ಯಾಕ್ಸ್ ವೆಲ್ (32) ಹಾಗು ದೀಪಕ್ ಹೂಡ (15) ರನ್ ಗಳುಸಿದರು. ಡೆಲ್ಲಿ ಪರ ಕಗಿಸೊ ರಬಾಡ 2 ವಿಕೆಟ್, ಅಕ್ಸಾರ್ ಪಟೇಲ್, ಅಶ್ವಿನ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭಿಕ ಆಟಗಾರ ಶಿಖರ್ ಧವನ್ (106*) ಅವರ ಅಜೇಯ ಶತಕ, ಶ್ರೇಯಸ್ ಅಯ್ಯರ್(14), ರಿಷಬ್ ಪಂತ್ (14) ಹಾಗು ಶಿಮ್ರನ್ ಹೆತ್ಮೆಯೇರ್ (10) ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿತು. ಕಿಂಗ್ಸ್ ಇಲೆವೆನ್ ಪಂಜಾಬ್ ಪರ, ಮಹಮದ್ ಶಮಿ 2 ವಿಕೆಟ್, ಮ್ಯಾಕ್ಸ್ ವೆಲ್, ಜೇಮ್ಸ್ ನಿಶಮ್, ಮುರುಗನ್ ಅಶ್ವಿನ್ ತಲಾ 1 ವಿಕೆಟ್ ಪಡೆದರು.

Vijayaprabha Mobile App free

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅಮೋಘ ಶತಕ ಸಿಡಿಸಿದ ಶಿಖರ್ ದವನ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

ಇದನ್ನು ಓದಿ: ಕೊರೊನಾ ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ: ಸಿದ್ದರಾಮಯ್ಯ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.