ಪಂಜಾಬ್ ವಿರುದ್ಧ ಕೆಕೆಆರ್ ತಂಡಕ್ಕೆ 2 ರನ್ ರೋಚಕ ಜಯ

ಅಬುದಾಬಿ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶೇಖ್ ಜಾಯೆದ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 24ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ  2  ರನ್ ರೋಚಕ ಗೆಲುವು ಸಾಧಿಸಿದೆ.

165 ರನ್ ಗುರಿಯನ್ನು ಬೆನ್ನಟ್ಟಿದ ಕಿಂಗ್ಸ್ ಇಲೆವೆನ್ ಪಂಜಾಬ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿ 2 ರನ್  ಗಳಿಂದ ಸೋಲಿಗೆ ಶರಣಾಯಿತು. ಪಂಜಾಬ್ ಪರ ಆರಂಭಿಕ ಆಟಗಾರದ ಮಾಯಾಂಕ್ ಅಗರ್ವಾಲ್-56, ನಾಯಕ ಕೆ.ಎಲ್ ರಾಹುಲ್ -74, ನಿಕೊಲಸ್ ಪೂರನ್-16 ರನ್ ಗಳಿಸಿದರು. ಕೆಕೆಆರ್ ಪರ, ಪ್ರಸಿದ್ ಕೃಷ್ಣ 3 ವಿಕೆಟ್,  ಸುನಿಲ್ ನರೇನ್ 1 ವಿಕೆಟ್ ಪಡೆದರು.

ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭಿಕ ಆಟಗಾರ ಶುಭ್ ಮಾನ್ ಗಿಲ್-57, ಇಯಾನ್ ಮಾರ್ಗನ್-24, ನಾಯಕ ದಿನೇಶ್ ಕಾರ್ತಿಕ್-58, ಅವರ ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಎಲ್ಲಾ 6 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿತು. ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಮಹಮದ್ ಶಮಿ, ರವಿ ಬಿಶ್ನೋಯ್ ಹಾಗೂ ಅರ್ಶದೀಪ್ ಸಿಂಗ್ ತಲಾ 1 ವಿಕೆಟ್ ಪಡೆದರು.

Advertisement

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement