ವೃತ್ತಿ ಪ್ರೋತ್ಸಾಹ ಸಾಲ ಯೋಜನೆ | ರೂ.1,00,000 ವರೆಗೆ ಉಚಿತ ಸಾಲ? ಉದ್ದೇಶ, ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ

ವೃತ್ತಿ ಪ್ರೋತ್ಸಾಹ ಸಾಲ ಯೋಜನೆ : ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯನ್ನು (Career Promotion Loan Scheme) ಪ್ರಾರಂಭಿಸಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು (KMDC) ಜಾರಿಗೆ…

loan scheme

ವೃತ್ತಿ ಪ್ರೋತ್ಸಾಹ ಸಾಲ ಯೋಜನೆ : ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯನ್ನು (Career Promotion Loan Scheme) ಪ್ರಾರಂಭಿಸಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು (KMDC) ಜಾರಿಗೆ ತಂದಿರುವ ಈ ಯೋಜನೆಯು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅರ್ಹ ವ್ಯಕ್ತಿಗಳಿಗೆ ತಮ್ಮ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ವಿಸ್ತರಿಸಲು ಆರ್ಥಿಕ ಸಹಾಯವನ್ನು (Financial Assistance) ಒದಗಿಸಿ ಆರ್ಥಿಕ ಸಬಲೀಕರಣ ಮತ್ತು ಸ್ವಾವಲಂಬನೆಯನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: ಉಚಿತ ವಿದ್ಯುತ್‌ ಸಂಪರ್ಕ ಒದಗಿಸುವ ಪ್ರಧಾನ ಮಂತ್ರಿ ಸೌಭಾಗ್ಯ ಯೋಜನೆ; ಉದ್ದೇಶ, ಪ್ರಯೋಜನಗಳು, ಅರ್ಜಿ ಸಲ್ಲಿಕೆ

Vijayaprabha Mobile App free

ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಮುಖ್ಯ ಉದ್ದೇಶ, ವೈಶಿಷ್ಟ್ಯಗಳು

loan scheme

  • ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಸರ್ಕಾರದ ಯೋಜನೆ.
  • ವ್ಯಾಪಾರ ಚಟುವಟಿಕೆ ಪ್ರಾರಂಭಿಸಲು ಸಹಾಯಧನ ಒದಗಿಸುತ್ತದೆ.
  • ಫಲಾನುಭವಿಗಳಿಗೆ ರೂ.1,00,000/- ವರೆಗೆ ಉಚಿತ ಸಾಲ ನೀಡಲಾಗುತ್ತದೆ.
  • ಫಲಾನುಭವಿಯು ಸಾಲದ ಅರ್ಧ ಮೊತ್ತ ಮಾತ್ರ ಹಿಂದಿರುಗಿಸಬೇಕಾಗುತ್ತದೆ.
  • ಉಳಿದ 50,000/- ಅನ್ನು ಸರ್ಕಾರವು 50% ಸಬ್ಸಿಡಿಯಾಗಿ ಪಾವತಿಸುತ್ತದೆ.
  • ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯನ್ನು ಪ್ರಾರಂಭಿಸುವುದರ ಹಿಂದಿನ ಮುಖ್ಯ ಉದ್ದೇಶವೆಂದರೆ ನಿರುದ್ಯೋಗಿ ಯುವಕರು ಅಥವಾ ಹೊಸ ಉದ್ಯಮಿಗಳು ತಮ್ಮ ಸ್ವಂತ ಆದಾಯ ಉತ್ಪಾದನೆ ಚಟುವಟಿಕೆಯನ್ನು ಪ್ರಾರಂಭಿಸಲು ಬೆಂಬಲಿಸುವುದಾಗಿದೆ.

ಇದನ್ನು ಓದಿ: NALCO Recruitment | NALCO ದಲ್ಲಿ 518 ವಿವಿಧ ಹುದ್ದೆಗಳಿಗೆ ನೇಮಕಾತಿ

ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ಈ ಚಟುವಟಿಕೆಗಳಿಗೆ ಸಾಲ ನೀಡಲಾಗುತ್ತದೆ

ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ (Career Promotion Loan Scheme) ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಾಲವನ್ನು ನೀಡಲಾಗುತ್ತದೆ.

ರಾಜ್ಯ, ಕೇಂದ್ರ, ಸರ್ಕಾರಿ ಉದ್ಯೋಗಿಗಳಾಗಿರದ ಕುಟುಂಬದ ಅರ್ಜಿದಾರರರು ಕೃಷಿ ಆಧಾರಿತ ಚಟುವಟಿಕೆಗಳು, ವ್ಯಾಪಾರವನ್ನು ಅಭಿವೃದ್ಧಿಪಡಿಸಲು ಅಥವಾ ಹೊಸ ವ್ಯಾಪಾರವನ್ನು ಪ್ರಾರಂಭಿಸಲು, ಸಣ್ಣ ಪ್ರಮಾಣದ ಕೈಗಾರಿಕೆಗಳು, ಸೇವಾ ವಲಯ, ಯಾವುದೇ ಸ್ವಯಂ ಉದ್ಯೋಗ ಸೃಷ್ಟಿ ಚಟುವಟಿಕೆಗಳನ್ನು ಪ್ರಾರಂಭಿಸಲು ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯು ಸಾಲ ಸೌಲಭ್ಯ (Loan Scheme) ನೀಡುತ್ತದೆ.

ಇದನ್ನೂ ಓದಿ: Udyogini yojana | ಉದ್ಯೋಗಿನಿ ಯೋಜನೆಯಿಂದ 3 ಲಕ್ಷ ಉಚಿತ ಲೋನ್ ಹೇಗೆ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

ವೃತ್ತಿ ಪ್ರೋತ್ಸಾಹ ಸಾಲ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ

ಅರ್ಜಿದಾರರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ ಗೆ https://kmdc.karnataka.gov.in/ ಭೇಟಿ ನೀಡಬೇಕು. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಕ್ಲಿಕ್ ಮಾಡಿ ಮೊಬೈಲ್ ಸಂಖ್ಯೆ ನಮೂದಿಸಿ. ಆಧಾರ್ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆಗೆ ಬಂದ ಒಟಿಪಿ ನಮೂದಿಸಿ ಮತ್ತು ಮುಂದುವರಿಯಿರಿ ಆಯ್ಕೆ ಮಾಡಿ. ಎಲ್ಲ ವಿವರಗಳನ್ನು ಭರ್ತಿ ಮಾಡಿ ಅಗತ್ಯ ಡಾಕ್ಯುಮೆಂಟ್ ,ಪಾಸ್ಪೋರ್ಟ್ ಗಾತ್ರದ ಫೋಟೋ ಇತ್ಯಾದಿಗಳನ್ನು ಅಪ್ಲೋಡ್ ಮಾಡಿ. ಮುಂದುವರಿಯಿರಿ ಕ್ಲಿಕ್ ಮಾಡಿ ಅಪ್ಲಿಕೇಶನ್ ಸಲ್ಲಿಸಿ ಆಯ್ಕೆ ಮಾಡಿ. ಅಪ್ಲಿಕೇಶನ್ ಐಡಿಯನ್ನು ಪಡೆಯಿರಿ.

ಇದನ್ನೂ ಓದಿ: PF withdrawal | ಪಿಎಫ್ ಹಣ ವಿತ್ ಡ್ರಾ ಮಾಡಬೇಕಾ..? ಇನ್ಮೇಲೆ ನೀವೇ ಸುಲಭವಾಗಿ ಸ್ವತಃ ಅಪ್ರುವಲ್ ಮಾಡಿಕೊಳ್ಳಬಹುದು..!

ವೃತ್ತಿ ಪ್ರೋತ್ಸಾಹ ಸಾಲ ಯೋಜನೆಗೆ ಅರ್ಹತೆಗಳು

  • ಅರ್ಜಿದಾರರು ಕರ್ನಾಟಕದ ನಿವಾಸಿಯಾಗಿರಬೇಕು.
  • ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
  • ಕುಟುಂಬದ ಆದಾಯ ಗ್ರಾಮೀಣ ಪ್ರದೇಶದಲ್ಲಿ ರೂ.81,000
  • ನಗರ ಪ್ರದೇಶದಲ್ಲಿ ವಾರ್ಷಿಕ ಆದಾಯ ರೂ. 1,03,000
  • ಇತರ KMDCL ಯೋಜನೆಯ ಫಲಾನುಭವಿಯಾಗಿರಬಾರದು.
  • ಯಾವುದಾದರೂ ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು.

ಇದನ್ನೂ ಓದಿ: ಕಾರ್ಮಿಕರೇ ಗಮನಿಸಿ: ನಿಮ್ಮ ಬಳಿ ಇ-ಶ್ರಮ್ ಕಾರ್ಡ್ ಇದ್ರೆ ಪ್ರತಿ ತಿಂಗಳು ಸಿಗಲಿದೆ 3000..!

ವೃತ್ತಿ ಪ್ರೋತ್ಸಾಹ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳು

ಕರ್ನಾಟಕ ಸರ್ಕಾರದ ವೃತ್ತಿ ಪ್ರೋತ್ಸಾಹ ಸಾಲ ಯೋಜನೆಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಕೆಲವು ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಕರ್ನಾಟಕದ ನಿವಾಸ ಪುರಾವೆ, ಅಲ್ಪಸಂಖ್ಯಾತರ ಪ್ರಮಾಣಪತ್ರ, ಬ್ಯಾಂಕ್ ಖಾತೆ ವಿವರಗಳು, ಆದಾಯ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಪಾಸ್ಪೋರ್ಟ್ ಗಾತ್ರದ ಫೋಟೋ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಯೋಜನಾ ವರದಿ.
ಹೆಚ್ಚಿನ ಮಾಹಿತಿಯನ್ನು ವಿಡಿಯೋದಲ್ಲಿ ನೋಡಬಹುದು.
ಕೃಪೆ: Digital Shikaripura

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.