ಕೊಡಗು: ಕಾವೇರಿ ನದಿಯಲ್ಲಿ ಸ್ನಾನಕ್ಕೆ ಇಳಿದ ಬಾಲಕನೋರ್ವ ನೀರಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ ಧಾರುಣ ಘಟನೆ ಕೊಡಗು ಜಿಲ್ಲೆಯ ಎಮ್ಮೆಮಾಡುವಿನಲ್ಲಿ ನಡೆದಿದೆ. ಅನೀಫ್ ಎಂಬುವವರ ಪುತ್ರ ಉವೈಸ್(13) ಮೃತ ದುರ್ದೈವಿ ಬಾಲಕನಾಗಿದ್ದಾನೆ.
ದೀಪಾವಳಿ ಹಬ್ಬದ ಪ್ರಯುಕ್ತ ಶಾಲೆಗೆ ರಜೆ ಇದ್ದ ಹಿನ್ನಲೆ ಬಾಲಕ ಉವೈಸ್ ತನ್ನ ಸ್ನೇಹಿತರೊಂದಿಗೆ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ. ಈ ವೇಳೆ ನೀರಿನ ಹರಿವು ಹೆಚ್ಚಿಗೆ ಇದ್ದು ಸ್ನಾನಕ್ಕೆಂದು ಇಳಿದಿದ್ದ ಬಾಲಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಕೂಡಲೇ ಸ್ನೇಹಿತರು ಬಾಲಕನಿಗಾಗಿ ಹುಡುಕಾಟ ನಡೆಸಿದರಾದರೂ ಯಾವುದೇ ಪ್ರಯೋಜನವಾಗಿಲ್ಲ.
ಬಾಲಕ ಕಣ್ಮರೆಯಾದ ಹಿನ್ನಲೆ ಸ್ಥಳೀಯರು ಹಾಗೂ ಸಂಬಂಧಿಕರು ಸೇರಿ ಕಾವೇರಿ ನದಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದು ಬಾಲಕ ಮಾತ್ರ ಇನ್ನೂ ಸಿಕ್ಕಿಲ್ಲ. ಸ್ಥಳಕ್ಕೆ ನಾಪೋಕ್ಲು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಣ್ಮರೆಯಾದ ಬಾಲಕನಿಗಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ.